Job Description: * ಆಂಧ್ರಪ್ರದೇಶ ಸರ್ಕಾರವು ತಂಬಾಕು ಉತ್ಪನ್ನಗಳನ್ನು ಒಂದು ವರ್ಷದವರೆಗೆ ನಿಷೇಧಿಸಿ ಆದೇಶ ಹೊರಡಿಸಿದೆ, ಇದೀಗ ಆಂಧ್ರಪ್ರದೇಶ ರಾಜ್ಯದಲ್ಲಿ ತಂಬಾಕು, ಗುಟ್ಕಾ, ಪಾನ್ ಮಸಾಲಾವನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದೆ. * ಆಂಧ್ರ ರಾಜ್ಯದಲ್ಲಿ ಇದೇ ಡಿಸೆಂಬರ್. 07 ರಿಂದ ಗುಟ್ಕಾ, ಪಾನ್ ಮಸಾಲಾ ಮತ್ತು ಜಗಿಯಲಾದ ತಂಬಾಕು ವಸ್ತುಗಳ ತಯಾರಿಕೆ, ವಿತರಣೆ ಹಾಗೂ ಮಾರಾಟವನ್ನು ನಿಷೇಧಿಸಿದೆ ಎಂದು ಆಂಧ್ರ ಸರ್ಕಾರ ಆದೇಶಿಸಿದೆ, ಅಷ್ಟೇ ಅಲ್ಲದೆ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿದರೇ ಕ್ರಮ ಕೈಗೊಳ್ಳಲಗುವದು ಎಂದು ತಿಳಿಸಲಾಗಿದೆ. * ಪ್ರಸ್ತುತ ಗುಟ್ಕಾ ನಿಷೇಧ ಪ್ರಶ್ನಿಸಿ ಆಂಧ್ರ ಹೈಕೋರ್ಟ್ ನಲ್ಲಿ 160 ಅರ್ಜಿಗಳು ಸಲ್ಲಿಕೆಯಾಗಿದ್ದವು ಆದರೆ ಆ ಎಲ್ಲ ಅರ್ಜಿಗಳನ್ನು ವಜಾ ಮಾಡಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.