Job Description: * ಇದೀಗ BCCI ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳ ಟೀಂ ಇಂಡಿಯಾ ನಾಯಕನಾಗಿ ರೋಹಿತ್ ಶರ್ಮಾ ಅವರನ್ನು ನೇಮಕ ಮಾಡಿದೆ, ಈ ಹಿಂದೆ ಈ ಸ್ಥಾನವನ್ನು ವಿರಾಟ್ ಕೊಹ್ಲಿ ಅವರು ನಿರ್ವಹಿಸುತ್ತಿದ್ದರು, ಇದೀಗ ಇವರ ಈ ಸ್ಥಾನಕ್ಕೆ ರೋಹಿತ್ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ ಎಂದು ಬಿಸಿಸಿಐ(BCCI) ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದೆ. * ಇದೀಗ ವಿರಾಟ್ ಕೊಹ್ಲಿ ಅವರು ಟೆಸ್ಟ್ ಕ್ರಿಕೆಟ್ ತಂಡದ ನಾಯಕನಾಗಿ ಮುಂದುವರೆಯಲಿದ್ದಾರೆ, ಹಾಗೂ ಉಪನಾಯಕನಾಗಿ ರೋಹಿತ್ ಶರ್ಮಾರನ್ನು ಆಯ್ಕೆ ಮಾಡಲಾಗಿದೆ. * ಈ ಮೊದಲು ಆರಂಭಿಕ ಬ್ಯಾಟ್ಸ್ ಮನ್ ಅಜಿಂಕ್ಯ ರಹಾನೆ ಅವರು ಟೆಸ್ಟ್ ಕ್ರಿಕೆಟ್ ತಂಡದ ಉಪನಾಯಕನಾಗಿದ್ದರು, ಇದೀಗ ಇವರ ಈ ಸ್ಥಾನವನ್ನು ರೋಹಿತ್ ಶರ್ಮಾ ವಹಿಸಿಕೊಳ್ಳಲಿದ್ದಾರೆ. * ರೋಹಿತ್ ಶರ್ಮಾ ಅವರು ಇತ್ತೀಚಿಗೆ ನಡೆದ ನ್ಯೂಜಿಲೆಂಡ್ ವಿರುದ್ಧದ ಸ್ವದೇಶಿ ಸರಣಿಗೆ T20I ತಂಡದ ನಾಯಕರಾಗಿದ್ದರು.