Job Description: * ಪ್ರಸ್ತುತ ಕರ್ನಾಟಕ ರಾಜ್ಯವು ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ-2021 ರ ಅಡಿಯಲ್ಲಿ ಉತ್ತಮ ಪರ್ಫಾಮೆನ್ಸ್ ವಿಭಾಗದಲ್ಲಿ (ಗ್ರೂಪ್-1) ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ, ಕರ್ನಾಟಕಕ್ಕೆ ಈ ಗೌರವ ಪ್ರಶಸ್ತಿಯು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮವು ಇಂಧನ ಉಳಿತಾಯಕ್ಕಾಗಿ ಕೈಗೊಂಡ ಕ್ರಮಗಳಿಂದಾಗಿ ಈ ಗೌರವ ಲಭಿಸಿದೆ. * ನವದೆಹಲಿಯಲ್ಲಿ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಜರುಗಿರುವ ಸಮಾರಂಭದಲ್ಲಿ ಕೇಂದ್ರ ವಿದ್ಯುತ್ ಮತ್ತು ನವ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾದ ಆರ್.ಕೆ.ಸಿಂಗ್ ಅವರು ಕರ್ನಾಟಕ ರಾಜ್ಯಕ್ಕೆ ಈ ಪ್ರಶಸ್ತಿ ಪ್ರದಾನ ಮಾಡಿದ್ದಾರೆ, ಈ ಪ್ರಶಸ್ತಿಯನ್ನು ರಾಜ್ಯ ಇಂಧನ ಇಲಾಖೆಯ ಮುಖ್ಯ ಕಾರ್ಯದರ್ಶಿ ಜಿ.ಕುಮಾರ ನಾಯಕ ಹಾಗೂ ಕೆ.ಆರ್.ಇ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಅವರು ಸ್ವೀಕರಿಸಿದ್ದಾರೆ. * ಪ್ರತಿ ವರ್ಷ ಡಿಸೆಂಬರ್ 14 ರಂದು ಕೇಂದ್ರ ಇಂಧನ ಸಚಿವಾಲಯದ ಅಡಿಯಲ್ಲಿ ಬ್ಯೂರೋ ಆಫ್ ಎನರ್ಜಿ ಎಫೀಶಿಯನ್ಸಿ, ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಈ ಪ್ರಶಸ್ತಿಯನ್ನು ನೀಡುತ್ತದೆ ಹಾಗೂ ಇದು ಇಂಧನ ಉಳಿತಾಯಕ್ಕೆ ಕೊಡುಗೆ ನೀಡುತ್ತಿರುವ ಸಂಸ್ಥೆಗಳನ್ನು ಉತ್ತೇಜನವನ್ನು ನೀಡುತ್ತದೆ. * ಪ್ರಸ್ತುತ 2020 ರ ರಾಜ್ಯ ಇಂಧನ ಕ್ಷಮತೆ ಇಂಡೆಕ್ಸ್'ನಲ್ಲಿ ಕರ್ನಾಟಕ ರಾಜ್ಯವು 100 ರಲ್ಲಿ 70 ಅಂಕಗಳನ್ನೂ ಪಡೆದಿದೆ. ಕರ್ನಾಟಕ ರಾಜ್ಯವು 'ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ-2021 ರ ಅಡಿಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿರುವದು ಹೆಮ್ಮೆಯ ವಿಷಯವಾಗಿದೆ ರಾಜ್ಯ ಇಂಧನ ಸಚಿವ ವಿ.ಸುನಿಲ್ ಕುಮಾರ್ ಅವರು ತಿಳಿಸಿದ್ದಾರೆ. * ಈ ಹಿಂದೆ 1991 ರಿಂದ ಕೇಂದ್ರ ಇಂಧನ ಸಚಿವಾಲಯ ಈ ಪ್ರಶಸ್ತಿ ನೀಡಲು ಪ್ರಾರಂಭಿಸಿದೆ, ಹಾಗೂ ಪ್ರತಿ ವರ್ಷವು ಇಂಧನ ಕ್ಷಮತೆಯಲ್ಲಿ ಸಾಧನೆಯನ್ನು ಮಾಡಿರುವ ಕೈಗಾರಿಕಾ ಸಂಸ್ಥೆಗಳನ್ನೂ ಗುರುತಿಸಲು ಈ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ. * ಈ ಹಿಂದೆ 1996 ರಲ್ಲಿ ಕರ್ನಾಟಕ ರಾಜ್ಯದಲ್ಲಿ ನವೀಕರಿಸಬಹುದಾದ ಇಂಧನ ಯೋಜನೆಗಳ ಅನುಷ್ಠಾನಕ್ಕಾಗಿ ಕೆ.ಆರ್.ಇ.ಡಿ.ಎಲ್ ಕರ್ನಾಟಕ ಸರ್ಕಾರದ ನೋಡಲ್ ಏಜೆನ್ಸಿಯಾಗಿ ಸ್ಥಾಪನೆಯಾಗಿದೆ.