Job Description: * ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಚುನಾವಣಾ ಕಾನೂನುಗಳ ತಿದ್ದುಪಡಿ ಮಸೂದೆ 2021'ನ್ನು ಮತದಾರರ ಪಟ್ಟಿಯನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಲು ಲೋಕಸಭೆಯುಲ್ಲಿ ಅಂಗೀಕರಿಸಲಾಗಿದೆ. ಪ್ರಸ್ತುತ ಗುರುತನ್ನು ಸ್ಥಾಪಿಸುವ ಉದ್ದೇಶದ ಅಡಿಯಲ್ಲಿ ಮತದಾರರಾಗಿ ನೋಂದಾಯಿಸಲು ಬಯಸುವ ಜನರ ಆಧಾರ್ ಸಂಖ್ಯೆಯನ್ನು ಪಡೆಯಲು ಚುನಾವಣಾ ನೋಂದಣಿ ಅಧಿಕಾರಿಗಳಿಗೆ ಅವಕಾಶ ನೀಡಲು ಈ ಮಸೂದೆಯಲ್ಲಿ ಉಲ್ಲೇಖ ಮಾಡಲಾಗಿದೆ, ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಮಸೂದೆಯನ್ನು ಮಂಡಿಸಲಿದ್ದಾರೆ. * ಲೋಕಸಭೆಯ ಕಾಂಗ್ರೆಸ್ ನಾಯಕರು ಈ ಮಸೂದೆಯನ್ನು ವಿರೋಧಿಸಿ ಇದನ್ನು ಸ್ಥಾಯಿ ಸಮಿತಿಗೆ ಕಳುಹಿಸಬೇಕು' ಎಂದು ಹೇಳಿದ್ದಾರೆ. * ಕೇಂದ್ರ ಸರ್ಕಾರವು ಮಂಡಿಸಿರುವ ಈ ಮಸೂದೆಯ ಅಡಿಯಲ್ಲಿ ಮತದಾರರ ಪಟ್ಟಿಯಲ್ಲಿ ನಕಲು ಮತ್ತು ನಕಲಿ ಮತದಾನವನ್ನು ತಡೆಯಲು ಮತದಾರರ ಕಾರ್ಡ್'ಗಳನ್ನು ಆಧಾರ್ ಕಾರ್ಡ್'ಗಳಿಗೆ ಲಿಂಕ್ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.