Job Description: * ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಸಭೆ ಅಧಿವೇಶನದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ-2021 ನ್ನು ಮಂಡಿಸಿದ್ದಾರೆ. * ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ಅವರು ವಿಧಾನಸಭೆಯ ಅಧಿವೇಶನದಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಅವಕಾಶವನ್ನು ಕಲ್ಪಿಸಿದರು. ಈ ಕಾಯ್ದೆ ಮಂಡನೆಗೆ ವಿಧೇಯಕದ ಪ್ರತಿಯನ್ನು ನೀಡಿಲ್ಲ, ಹಾಗೂ ಯಾವುದೇ ವಿಷಯವನ್ನು ಚರ್ಚಿಸಿಲ್ಲ ಎಂದು ವಿರೋಧ ಪಕ್ಷಗಳ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. * ಈ ಮತಾಂತರ ನಿಷೇಧ ಕಾಯ್ದೆ ಮಂಡನೆಯನ್ನು ಡಿಸೆಂಬರ್ 22 ರಂದು ಚರ್ಚೆಗೆ ತೆಗೆದುಕೊಳ್ಳಲಾಗುತ್ತದೆ ಎಂದು ಘೋಷಿಸಿದ್ದಾರೆ. * ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ-2021 ನ್ನು ರಾಜ್ಯದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣೆ ಹಾಗೂ ಬಲವಂತ, ಅನುಚಿತ ಪ್ರಭಾವ, ಒತ್ತಾಯ, ಆಮಿಷ ನೀಡುವ ಮೂಲಕ ಅಥವಾ ಯಾವುದೇ ವಂಚನೆಯ ವಿಧಾನಗಳ ಮೂಲಕ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಕಾನೂನು ಬಾಹಿರ ಮತಾಂತರ ಮಾಡುವುದನ್ನು ನಿಷೇಧಿಸುವ ಸಲುವಾಗಿ ಜಾರಿಗೆ ಮಾಡಲಾಗುತ್ತಿರುವ ವಿಧೇಯಕವಾಗಿದೆ. * ಒಂದು ವೇಳೆ ಮತಾಂತರಗೊಳ್ಳಲು ಇಚ್ಚಯಿಸುವ ವ್ಯಕ್ತಿಯು 2 ತಿಂಗಳ ಮೊದಲೇ ಸಕ್ಷಮ ಪ್ರಾಧಿಕಾರದ ಮುಂದೆ ಅರ್ಜಿ ಸಲ್ಲಿಸಬೇಕು, ಇದರ ಅನ್ವಯ ಮತಾಂತರ ಪ್ರಕ್ರಿಯೆಯನ್ನು ಯಾವುದೇ ಬಲವಂತವಾಗಿ ಮಾಡುವಂತಿಲ್ಲ ಎಂದು ಕಟ್ಟು ನಿಟ್ಟಿನ ಷರತ್ತು ವಿಧಿಸಲಾಗಿದೆ.