Job Description: * ಪ್ರಸ್ತುತ ರಾಷ್ಟ್ರ ಪ್ರಶಸ್ತಿ ವಿಜೇತ ಮಲಯಾಳಂನ ಖ್ಯಾತ ಚಲನಚಿತ್ರ ನಿರ್ಮಾಪಕ ಕೆ.ಎಸ್.ಸೇತುಮಾಧವನ್ ಅವರು ತಮ್ಮ 90 ನೇ ವರ್ಷ ವಯಸ್ಸಿನಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. * ಕೆ.ಎಸ್.ಸೇತುಮಾಧವನ್ ಅವರು 1931 ರಲ್ಲಿ ಕೇರಳದ ಉತ್ತರ ಪಾಲಕ್ಕಾಡ್ ಜಿಲ್ಲೆಯಲ್ಲಿ ಜನಿಸಿದ್ದರು, ಇವರು ಸಹಾಯಕ ನಿರ್ದೇಶಕರಾಗಿ ಮಲಯಾಳಂ ಚಿತ್ರರಂಗಕ್ಕೆ ಪಾದಾರ್ಪಣೆಯನ್ನು ಮಾಡಿದ್ದರು, ಇವರು 1960 ರ ದಶಕದಲ್ಲಿ ತಮ್ಮ ಚಲನಚಿತ್ರ ವೃತ್ತಿಜೀವನವನ್ನು ಆರಂಭಿಸಿದ್ದಾರೆ, ಇವರು ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಈ ಎಲ್ಲ ಭಾಷೆಗಳಲ್ಲಿ ಸುಮಾರು 60 ಕ್ಕೂ ಅಧಿಕ ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ. * ಕೆ.ಎಸ್. ಸೇತುಮಾಧವನ್ ಅವರು 10 ರಾಷ್ಟ್ರೀಯ ಪ್ರಶಸ್ತಿಗಳು, ಹಾಗೂ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ, ಕೇರಳ ಸರ್ಕಾರವು 2009 ರಲ್ಲಿ ಸ್ಥಾಪಿಸಿರುವ ಚಲನಚಿತ್ರ ಕ್ಷೇತ್ರದ ಅತ್ಯುನ್ನತ ಗೌರವ ಜೆ.ಸಿ. ಡೇನಿಯಲ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.