Job Description: * ಪ್ರಸ್ತುತ ಕೇಂದ್ರ ಸರ್ಕಾರವು ಕೃಷಿ ಭೂಮಿಗಳಲ್ಲಿ ಕೀಟನಾಶಕ ಹಾಗೂ ರಸಗೊಬ್ಬರ ಸಿಂಪಡಣೆಗಾಗಿ ಡ್ರೋನ್ ಬಳಕೆ ಮಾಡಲು ಅನುಮತಿ ನೀಡಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ತಿಳಿಸಿದ್ದಾರೆ. * ಮಾಜಿ ಪ್ರಧಾನಿಯಾಗಿದ್ದ ದಿವಂಗತ. ಅಟಲ್ ಬಿಹಾರಿ ವಾಜಪೇಯಿ ಅವರ 97 ನೇ ಜನ್ಮ ದಿನದ ಅಂಗವಾಗಿ ರಾಜ್ಯದ ರಾಯಚೂರು ಕೃಷಿ ವಿಶ್ವವಿದ್ಯಾಲಯ ಹಾಗೂ ಧನುಕಾ ಅಗ್ರಿಟೆಕ್ ಲಿಮಿಟೆಡ್ ವತಿಯಿಂದ ಆಯೋಜಿಸಲಾಗಿರುವ ಕಾರ್ಯಕ್ರಮ ಕೇಂದ್ರ ಸಚಿವ ಭಗವಂತ ಖೂಬಾ ಈ ಮಾಹಿತಿಯನ್ನು ಬಹಿರಂಗ ಪಡಿಸಿದ್ದಾರೆ. * ಈ ಮೊದಲು ಕೃಷಿ ಕ್ಷೇತ್ರವನ್ನು ಹೊರತುಪಡಿಸಿ ಬೇರೆ ಎಲ್ಲ ಕ್ಷೇತ್ರಗಳಲ್ಲಿ ಡ್ರೋನ್‌'ಗಳನ್ನೂ ಬಳಸಲು ಅನುಮತಿ ನೀಡಲಾಗಿತ್ತು, ಇದೀಗ ಕೃಷಿ ಕ್ಷೇತ್ರದಲ್ಲಿ ಕೆಲಸಗಾರರ ಸಮಸ್ಯೆ, ಮತ್ತು ಖರ್ಚು ಕಡಿಮೆ ಮಾಡುವ ನಿಟ್ಟಿನಲ್ಲಿ ಡ್ರೋನ್‌'ಗಳನ್ನೂ ಬಳಸಲು ರೈತರಿಗೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ, ಅಷ್ಟೇ ಅಲ್ಲದೇ ಪ್ರತಿ ಗ್ರಾಮಗಳಲ್ಲಿ ಕನಿಷ್ಠ ಪಕ್ಷ 5 ವಿದ್ಯಾವಂತ ಯುವಕರು ಡ್ರೋನ್ ಮೂಲಕ ರಸ ಗೊಬ್ಬರ ಹಾಗೂ ಕೀಟನಾಶಕ ಸಿಂಪಡಣೆ ಮಾಡಿ ಆ ಹಳ್ಳಿಯಲ್ಲಿನ ರೈತರಿಗೆ ಮಾದರಿಯಾಗಬೇಕು ಎಂದು ತಿಳಿಸಿದ್ದಾರೆ, ಅಷ್ಟೇ ಅಲ್ಲದೇ ಎಲ್ಲ ರೈತರು ವಿದ್ಯುತ್ ಮೇಲಿನ ಅವಲಂಬನೆ ಕಡಿಮೆ ಮಾಡಿ, ಸೋಲಾರ್ ಅಳವಡಿಸಿ ವಿದ್ಯುತ್ ಉತ್ಪಾದನೆ ಮಾಡಲು ಆರಂಭಿಸಬೇಕು, ಈಗಾಗಲೇ ಸರ್ಕಾರವು ಸೋಲಾರ್‌ಗಾಗಿ ವಿವಿಧ ಸೌಲಭ್ಯ ಕಲ್ಪಿಸಿದೆ ಎಂದು ತಿಳಿಸಿದ್ದಾರೆ. * ಪ್ರಸ್ತುತ ಕೇಂದ್ರ ಸರ್ಕಾರವು ಶೇ. 30ರಷ್ಟು, ಹಾಗೂ ರಾಜ್ಯ ಸರ್ಕಾರವು ಶೇ. 30ರಷ್ಟು ಸಬ್ಸಿಡಿ ನೀಡುತ್ತಿದೆ, ಹಾಗೂ ರೈತರು ಶೇ.40ರಷ್ಟು ಹಣ ಭರಿಸಿ ಸೋಲಾರ್'ನ್ನು ಅಳವಡಿಸಿಕೊಳ್ಳಬೇಕು ಎಂದಿದ್ದಾರೆ.