Job Description: * ಪ್ರಸ್ತುತ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ ಧನ್ ಪಿಂಚಣಿ (PM Shramyogi Man-Dhan Yojana) ಯೋಜನೆ ಅಡಿಯಲ್ಲಿ ರಾಜ್ಯದಲ್ಲಿನ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿ ಊಟದ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರು ಹಾಗೂ ಸಹಾಯಕ ಅಡುಗೆ ಸಿಬ್ಬಂದಿಗಳು ಈ ಪಿಂಚಣಿ ಯೋಜನೆಯಡಿ ನೋಂದಾಯಿಸಿಕೊಳ್ಳಿ ಎಂದು ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ ತಿಳಿಸಿದೆ. * ಇದೀಗ ಕೇಂದ್ರ ಸರ್ಕಾರವು ವೃದ್ಧಾಪ್ಯದಲ್ಲಿ ಮಾಸಿಕ ಪಿಂಚಣಿ ಸೌಲಭ್ಯ ಕಲ್ಪಿಸುವ ಆರ್ಥಿಕ ಭದ್ರತೆ ನೀಡುವ ಉದ್ದೇಶದಿಂದ ಈ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದೆ. ಪ್ರಸ್ತುತ 18-40 ವರ್ಷ ವಯೋಮಾನದ ಅಸಂಘಟಿತ ವಲಯದ ಕಾರ್ಮಿಕರು ಈ ಯೋಜನೆಯಡಿ ಸೌಲಭ್ಯವನ್ನು ಪಡೆದುಕೊಳ್ಳಲು ಅರ್ಹರಿದ್ದಾರೆ ಅಧಿಕ ಸಂಖ್ಯೆಯಲ್ಲಿ ಮಧ್ಯಾಹ್ನದ ಬಿಸಿ ಊಟದ ಉಪಹಾರ ಯೋಜನೆಯಡಿ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರು ಹಾಗೂ ಸಹಾಯಕ ಅಡುಗೆ ಸಿಬ್ಬಂದಿಗಳಿಗೆ ಅಗತ್ಯವಿರುವ ಮಾಹಿತಿ ನೀಡಿ ಈ ಯೋಜನೆಯಡಿ ನೋಂದಾಯಿಸಿಕೊಳ್ಳಿ ಎಂದು ಕಾರ್ಮಿಕ ಇಲಾಖೆ ಸೂಚಿಸಿದೆ. * ಪ್ರಸ್ತುತ ರಾಜ್ಯದಲ್ಲಿನ ಎಲ್ಲ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮುಖ್ಯ ಮತ್ತು ಸಹಾಯಕ ಅಡುಗೆ ಸಿಬ್ಬಂದಿಗಳು ಅಸಂಘಟಿತ ಕಾರ್ಮಿಕ ವರ್ಗಕ್ಕೆ ಸೇರುವದರಿಂದ 60 ವರ್ಷದ ಬಳಿಕ ಅವರಿಗೆ ಮಾಸಿಕ ಪಿಂಚಣಿ ಸೌಲಭ್ಯ ಪಡೆಯುದರ ಜೊತೆಗೆ ಆರ್ಥಿಕ ಭದ್ರತೆ ಹೊಂದಬಹುದಾಗಿದೆ ಎಂದು ರಾಜ್ಯ ಕಾರ್ಮಿಕ ಇಲಾಖೆ ತಿಳಿಸಿದೆ.