Job Description: * ಇತ್ತೀಚಿಗಷ್ಟೇ ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಶನ್ಸ್ (ICCR)ನ ಮನವಿಯ ಮೇರೆಗೆ ಭಾರತೀಯ ವಿಮಾನಯಾನ ಸಂಸ್ಥೆಗಳು ಹಾಗೂ ದೇಶದ ವಿಮಾನ ನಿಲ್ದಾಣಗಳಲ್ಲಿ ಭಾರತೀಯ ಸಂಗೀತವನ್ನು ಹಾಕುವಂತೆ ಪತ್ರದ ಮೂಲಕ ತಿಳಿಸಿದೆ. * ಇದೀಗ ನಾಗರಿಕ ವಿಮಾನಯಾನ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿರುವ ಉಷಾ ಪಾಧೀ ಅವರು ಪ್ರಸ್ತುತ ವಿಮಾನ ನಿಲ್ದಾಣಗಳಲ್ಲಿ ಹಾಗೂ ಕಾರ್ಯನಿರ್ವಹಿಸುತ್ತಿರುವ ವಿಮಾನಗಳಲ್ಲಿ ಭಾರತೀಯ ಸಂಗೀತವನ್ನು ಹಾಕುವಂತೆ ಪತ್ರದ ಮೂಲಕ ವಿನಂತಿ ಮಾಡಿಕೊಳ್ಳಲಾಗಿದೆ ಎಂದಿದ್ದಾರೆ. * ಪ್ರಸ್ತುತ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ICCR ಅಧ್ಯಕ್ಷರು ಹಾಗೂ ರಾಜ್ಯಸಭೆಯ ಬಿಜೆಪಿ ಸಂಸದ, ವಿನಯ್ ಸಹಸ್ರಬುದ್ಧೆ ಅವರು ಹಲವು ಕಲಾವಿದರು ಹಾಗೂ ಗಾಯಕರ ಸಮ್ಮುಖದಲ್ಲಿ ಪತ್ರವನ್ನು ನೀಡಿದ್ದಾರೆ. ಇದೀಗ ಭಾರತದ ಖಾಸಗಿ ಮತ್ತು ಸರ್ಕಾರಿ ಒಡೆತನದ ವಿಮಾನಯಾನ ಸಂಸ್ಥೆಗಳು, ಮತ್ತು ದೇಶೀಯ ಹಾಗೂ ಅಂತರರಾಷ್ಟ್ರೀಯ ವಿಮಾನಯಾನ ಸಂಸ್ಥೆಗಳಲ್ಲಿ ಭಾರತೀಯ ಸಂಗೀತವನ್ನು ಹಾಕುವಂತೆ ಪತ್ರದ ಮೂಲಕ ವಿನಂತಿಸಿದ್ದಾರೆ. * ಭಾರತ ಸರ್ಕಾರದ ನಾಗರಿಕ ವಿಮಾನಯಾನ ಸಚಿವಾಲಯವು ನಾಗರಿಕ ವಿಮಾನಯಾನದ ಅಭಿವೃದ್ಧಿ ಹಾಗೂ ನಿಯಂತ್ರಣಕ್ಕಾಗಿ ರಾಷ್ಟ್ರೀಯ ನೀತಿಗಳ ಕಾರ್ಯಕ್ರಮಗಳನ್ನು ರೂಪಿಸುವ ಹಾಗೂ ಅನುಷ್ಠಾನಗೊಳಿಸುವ ಹೊಣೆಯನ್ನು ಹೊತ್ತಿರುವ ನೋಡಲ್ ಸಚಿವಾಲಯವಾಗಿದೆ. * ಜ್ಯೋತಿರಾದಿತ್ಯ ಸಿಂಧಿಯಾ ಅವರು ನಾಗರಿಕ ವಿಮಾನಯಾನ ಸಚಿವರಾಗಿದ್ದಾರೆ, ಇದು ದೆಹಲಿ ತನ್ನ ಪ್ರಧಾನ ಕಛೇರಿಯನ್ನು ಹೊಂದಿದೆ.