Job Description: * ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತಾ ವೈಷ್ಣೂದೇವಿ ಭವನದಲ್ಲಿ ಕಾಲ್ತುಳಿತಕ್ಕೆ ಬಲಿಯಾದವರಿಗೆ ಪಿಎಂ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಪರಿಹಾರ ನೀಡಲು ಅನುಮೋದನೆ ನೀಡಿದ್ದಾರೆ. * ಈ ಕುರಿತು ಪ್ರಧಾನಮಂತ್ರಿಯವರ ಕಚೇರಿ ಹೀಗೆ ಟ್ವೀಟ್‌ ಮಾಡಿದೆ : "ಮಾತಾ ವೈಷ್ಣೂದೇವಿ ಭವನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ʻಪಿಎಂಎನ್‌ಆರ್‌ಎಫ್ʼನಿಂದ ತಲಾ 2 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು: ಪ್ರಧಾನಿ ನರೇಂದ್ರ ಮೋದಿ @narendramodi"