Job Description: * ಪ್ರಸ್ತುತ ಉತ್ತರಪ್ರದೇಶದಲ್ಲಿರುವ ಮೀರತ್‌ ನಗರವನ್ನು 'ಕ್ರೀಡೆಗಳ ನಗರ' ಎಂದು ಕರೆಯುತ್ತಾರೆ, ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರ ಜೊತೆಗೂಡಿ ಅಲ್ಲಿನ ಭಗವಾನ್ ಔಘರ್ ನಾಥ ದೇವಾಲಯ ಹಾಗೂ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಿ, ಮೀರತ್‌ನಲ್ಲಿ ಸುಮಾರು 700 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿರುವ ರಾಜ್ಯದ ಮೊದಲ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಇಂದು ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಈ ಕಾರ್ಯಕ್ರಮದ ಸಮಾರಂಭದಲ್ಲಿ ರಾಜ್ಯದ 75 ಜಿಲ್ಲೆಗಳಿಂದ 16850 ಆಟಗಾರರನ್ನು ಕರೆಯಲಾಗಿತ್ತು. * ಪ್ರಸ್ತುತ ಈ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯ ಸರ್ಧಾನ ತಹಸಿಲ್‌ನ ಸಾಲ್ವಾದಲ್ಲಿ ಗಂಗಾನದಿ ಕಾಲುವೆಯ ದಡದಲ್ಲಿ 91.38 ಎಕರೆ ಪ್ರದೇಶದಲ್ಲಿ 700 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತದೆ ಎಂದಿದ್ದಾರೆ. ಇತ್ತೀಚಿಗೆ ಇದೇ ರಾಜ್ಯದ ಕಾನ್ಪುರದಲ್ಲಿ ಮೆಟ್ರೋ ರೈಲು ಯೋಜನೆಯ ಉದ್ಘಾಟನೆ, ಹಾಗೂ ವಾರಣಾಸಿಯಲ್ಲಿ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯ ಮೊದಲ ಹಂತದ ಕಾರ್ಯವನ್ನು ಉದ್ಘಾಟಿಸಿದ್ದಾರೆ. * ಇದೀಗ ಉತ್ತರ ಪ್ರದೇಶದ ರಾಜ್ಯ ವಿಧಾನಸಭೆ ಚುನಾವಣೆಯ ಕಾರಣಗಳಿಂದ ಈ ಎಲ್ಲ ಯೋಜನೆಗಳಿಗೆ ಚಾಲನೆ ನೀಡಲಾಗುತ್ತಿದೆ ಎನ್ನಲಾಗುತ್ತಿದೆ, ಪ್ರಸ್ತುತ ರಾಜ್ಯದ 403 ವಿಧಾನಸಭೆ ಕ್ಷೇತ್ರಗಳಿಗೂ ತಲುಪಲಿವೆ. ಅಷ್ಟೇ ಅಲ್ಲದೇ ಮುಂಬರುವ ವರ್ಷದಲ್ಲಿ ದೇಶದ '5' ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಅವುಗಳು: ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಹಾಗೂ ಮಣಿಪುರದಲ್ಲಿ ಚುನಾವಣೆ ನಡೆಯಲಿವೆ, ಹಾಗೂ 2022ರ ನಂತರದ ವರ್ಷದಲ್ಲಿ ಹಿಮಾಚಲ ಪ್ರದೇಶ ಹಾಗೂ ಗುಜರಾತ್ ರಾಜ್ಯಗಳಲ್ಲಿ ಚುನಾವಣೆ ನಡೆಯಲಿವೆ. * ಈ ಹಿಂದೆ 2017ರ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿನ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು 312 ಸ್ಥಾನಗಳಲ್ಲಿ ಗೆದ್ದು ಅಧಿಕಾರವನ್ನು ಪಡೆದಿತ್ತು.