Job Description: * ಪ್ರಸ್ತುತ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಪ್ರೆಸ್‍ಕ್ಲಬ್ ನೀಡುವ ಪ್ರೆಸ್‍ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. * ಪ್ರಸ್ತುತ ಪ್ರೆಸ್‍ಕ್ಲಬ್ ನೀಡುವ ಈ ಪ್ರೆಸ್‍ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿಗೆ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಹಾಗೂ ರಾಜ್ಯದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಮತ್ತು ಪದ್ಮಶ್ರೀ ಪ್ರಶಸ್ತಿ ವಿಜೇತ ಹರೆಕಳ ಹಾಜಬ್ಬ ಇನ್ನು ಹೀಗೆ ಹಲವಾರು ವ್ಯಕ್ತಿಗಳು ಈ 2021ನೆ ಸಾಲಿನ ಪ್ರೆಸ್‍ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದರು, ಈ ಪ್ರಶಸ್ತಿಯನ್ನು ಅಂತಿಮವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ನೀಡಲಾಗಿದೆ. * ಈ 2021ನೆ ಸಾಲಿನ ಪ್ರೆಸ್‍ಕ್ಲಬ್ ವಾರ್ಷಿಕ ಪ್ರಶಸ್ತಿಯನ್ನು 2022 ರ ಜನೇವರಿ. 06ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರುಗುವ ಸಮಾರಂಭದಲ್ಲಿ ಪ್ರಸ್ತುತ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಿದ್ದಾರೆ ಎಂದು ಪ್ರೆಸ್‍ಕ್ಲಬ್ ಅಧ್ಯಕ್ಷರಾದ ಸದಾಶಿವ ಶೆಣೈ, ಹಾಗೂ ಅದರ ಪ್ರಧಾನ ಕಾರ್ಯದರ್ಶಿ ಎಚ್.ವಿ. ಕಿರಣ್ ಅವರು ಹೇಳಿಕೆ ನೀಡಿದ್ದಾರೆ. * ಪ್ರಸ್ತುತ 2021ನೇ ಸಾಲಿನ ಪ್ರೆಸ್‍ಕ್ಲಬ್ ವಾರ್ಷಿಕ ಪ್ರಶಸ್ತಿಯ ಸಮಾರಂಭದಲ್ಲಿ 2020ನೇ ಸಾಲಿನ ಪ್ರೆಸ್‍ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿಗೆ ಆಯ್ಕೆಯಾಗಿರುವ ವಿಪ್ರೋ ಸಂಸ್ಥೆ ಅಧ್ಯಕ್ಷರಾದ ಅಜೀತ್ ಪ್ರೇಮ್‍ಜಿ, ಹಾಗೂ ವಿಶೇಷ ಪ್ರಶಸ್ತಿಗೆ ಆಯ್ಕೆಯಾದ ಕನ್ನಡ ಚಿತ್ರನಟ ಸುದೀಪ್, ನಾರಾಯಣ ಹೃದಯಾಲಯದ ಡಾ.ದೇವಿಶೆಟ್ಟಿ ಹಾಗೂ ಪ್ರೆಸ್‍ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿರುವ 25 ಹಿರಿಯ ಪತ್ರಕರ್ತರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ. * ವರ್ಷದ ವ್ಯಕ್ತಿ ಅಥವಾ ವರ್ಷದ ವ್ಯಕ್ತಿ ಯಾವುದೇ ರೀತಿಯ ಸಂಸ್ಥೆಯು ವ್ಯಕ್ತಿಗೆ ನೀಡುವ ಪ್ರಶಸ್ತಿಯಾಗಿದೆ. ಹೆಚ್ಚಾಗಿ ಈ ಪ್ರಶಸ್ತಿಯನ್ನು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿರುವ ಸಾರ್ವಜನಿಕ ವ್ಯಕ್ತಿಯನ್ನು ವಾರ್ಷಿಕವಾಗಿ ಗುರುತಿಸಲು ಪತ್ರಿಕೆ ಅಥವಾ ಇತರ ಸುದ್ದಿ ಔಟ್ಲೆಟ್ ಮೂಲಕ ನೀಡಲಾಗುವ ಪ್ರಶಸ್ತಿಯಾಗಿದೆ.