Job Description: * ಪ್ರಸ್ತುತ ಕರ್ನಾಟಕ ರಾಜ್ಯದಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಸತಿ ಶಾಲೆ(Residency School)ಗಳನ್ನು ಇನ್ನು ಮುಂದೆ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ಎಂದು ಪುನರ್ ನಾಮಕರಣ ಮಾಡಿ ಎಂದು ರಾಜ್ಯ ಸರ್ಕಾರ ಆದೇಶಿಸಿದೆ. * ಪ್ರಸ್ತುತ ಸಮಾಜ ಕಲ್ಯಾಣ ಇಲಾಖೆವತಿಯಿಂದ ರಾಜ್ಯಾದ್ಯಂತ 68 ವಸತಿ ಶಾಲೆಗಳನ್ನು ರಾಜ್ಯದಲ್ಲಿನ ಪರಿಶಿಷ್ಟ ಜಾತಿ ಮಕ್ಕಳಿಗೆ 1 ರಿಂದ 5ನೇ ತರಗತಿವರೆಗೆ ಶಿಕ್ಷಣವನ್ನು ನೀಡಲು ನಿರ್ವಹಿಸಲಾಗುತ್ತಿದೆ. ಪ್ರಸ್ತುತ ಈ ಶಾಲೆಗಳಲ್ಲಿ ಪ್ರತಿ ತರಗತಿಯ ಕೊಠಡಿಗೆ 25 ವಿದ್ಯಾರ್ಥಿಗಳಂತೆ 5ನೇ ತರಗತಿವರೆಗೆ ಸುಮಾರು 8,500 ವಿದ್ಯಾರ್ಥಿಗಳಿಗೆ ಈ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ, ವಸತಿ, ಭೋಜನ, ಸಮವಸ್ತ್ರ ಮೊದಲಾದ ಸವಲತ್ತುಗಳನ್ನು ಕಲ್ಪಿಸಲಾಗುತ್ತಿದೆ. * ಇದೀಗ ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ನಡೆಸಲಾಗುತ್ತಿರುವ ಪ್ರಾಥಮಿಕ ಹಂತದ ವಸತಿ ಶಾಲೆಗಳಿಗೆ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ಎಂದು ಪನರ್ ನಾಮಕರಣ ಮಾಡಿ ಎಂದು ಸೂಕ್ತ ಆದೇಶವನ್ನು ಹೊರಡಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು ರಾಜ್ಯ ಸರ್ಕಾರಕ್ಕೆ ಕೋರಿದ್ದಾರೆ. ಇದೀಗ ರಾಜ್ಯ ಸರ್ಕಾರವು ಈ ಕೋರಿಕೆಯನ್ನು ಪರಿಗಣಿಸಿ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳನ್ನು ಇನ್ನು ಮುಂದೆ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ಎಂದು ಮರುನಾಮಕರಣ ಮಾಡಿ ಎಂದು ರಾಜ್ಯ ಸರ್ಕಾರ ಆದೇಶಿಸಿದೆ.