Job Description: * ಪ್ರಸ್ತುತ ಕರ್ನಾಟಕ ರಾಜ್ಯ ಸರ್ಕಾರವು ಇದೀಗ ಗ್ರಾಮ ಪಂಚಾಯ್ತಿಗಳಲ್ಲಿನ 'ಇ-ಬೆಳಕು'(E-Belaku) ತಂತ್ರಾಂಶವನ್ನು ಲೋಕಾರ್ಪಣೆಗೊಳಿಸಿದೆ, ಈ ತಂತ್ರಾಂಶವು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಕುಡಿಯುವ ನೀರು, ಬೀದಿಯಲ್ಲಿನ ವಿದ್ಯುತ್ ದೀಪಗಳ ಸಮರ್ಪಕ ನಿರ್ವಹಣೆ ಮಾಡಲಿದೆ ಎಂದಿದ್ದಾರೆ. * ಪ್ರಸ್ತುತ ಈ 'ಇ-ಬೆಳಕು' ತಂತ್ರಾಂಶವನ್ನು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪನವರು ಲೋಕಾರ್ಪಣೆಗೊಳಿಸಿದ್ದಾರೆ. ಈ ತಂತ್ರಾಂಶದ ಮೂಲಕ ಗ್ರಾಮ ಪಂಚಾಯ್ತಿಗಳು ನಿಗದಿತ ಅವಧಿಯೊಳಗೆ ವಿದ್ಯುತ್ ಸರಬರಾಜು ಕಂಪನಿಗಳಿಗೆ ಬಾಕಿ ಮೊತ್ತವನ್ನು ಪಾವತಿಸಲು ಸಹಾಯ ಮಾಡಲಿದೆ ಎಂದಿದ್ದಾರೆ. ಹಾಗೂ ಅದೆಷ್ಟೋ ಕಾರ್ಯನಿರ್ವಹಿಸದೇ ಹಾಳಾಗಿರುವ ಕುಡಿಯುವ ನೀರಿನ ಘಟಕಗಳ ಸಂಪರ್ಕ ಹಾಗೂ ಅಗತ್ಯವಿಲ್ಲದ ವಿದ್ಯುತ್ ದೀಪಗಳ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ ಇದರಿಂದ ಅನಗತ್ಯ ವಿದ್ಯುತ್ ವೆಚ್ಚಕ್ಕೆ ಕಡಿವಾಣ ಹಾಕಲಾಗುತ್ತದೆ ಎಂದಿದ್ದಾರೆ. * 'ಇ-ಬೆಳಕು'(E-Belaku) ತಂತ್ರಾಂಶದ ಮೂಲಕ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ವಿದ್ಯುತ್ ಬಿಲ್'ಗಳನ್ನು ಆನ್ ಲೈನ್ ಮೂಲಕ ಪಾವತಿಸಲು ಇದು ಸಹಾಯ ಮಾಡಲಿದೆ, ಈ ಮೂಲಕ ಕುಡಿಯುವ ನೀರು, ಬೀದಿ ದೀಪಗಳ ಬಾಕಿ ಮೊತ್ತವನ್ನು ಸರಿಯಾದ ಸಮಯಕ್ಕೆ ಪಾವತಿಸಲು ಹಾಗೂ ಇನ್ನಿತರ ಯಾವುದೇ ಸಮಸ್ಯೆಯಾಗದಂತೆ ನಿರ್ವಹಣೆ ಮಾಡಲು ಈ ತಂತ್ರಾಂಶ ಸಹಾಯಮಾಡಲಿದೆ ಎಂದು ತಿಳಿಸಿದ್ದಾರೆ.