Job Description: * ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಜನೆವರಿ. 5 ರಂದು ಪಂಜಾಬ್‌ ರಾಜ್ಯಕ್ಕೆ ಭೇಟಿ ನೀಡಿದ್ದ ಸಂಧರ್ಭದಲ್ಲಿ ಅವರಿಗೆ ಒದಗಿಸಲಾಗಿರುವ ಭದ್ರತೆಯಲ್ಲಿ ಲೋಪ ಉಂಟಾಗಿದೆ, ಇದೀಗ ಸುಪ್ರೀಂ ಕೋರ್ಟ್‌ ಈ ಲೋಪದ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಇಂದು ಮಲ್ಹೋತ್ರ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ರಚಿಸಿದೆ. * ಪ್ರಸ್ತುತ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಇಂದು ಮಲ್ಹೋತ್ರ ಅವರು ಸುಪ್ರೀಂ ಕೋರ್ಟ್‌ ರಚಿಸಿರುವ ತನಿಖಾ ಸಮಿತಿಗೆ ಮುಖ್ಯಸ್ಥರಾಗಿರುತ್ತಾರೆ. ಇವರ ಜೊತೆಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಮಹಾ ನಿರೀಕ್ಷಕ, ಪಂಜಾಬ್‌ ರಾಜ್ಯದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ, ಹಾಗೂ ಚಂಡೀಗಡದ ಪೊಲೀಸ್‌ ಮಹಾ ನಿರ್ದೇಶಕ ಮತ್ತು ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌ನ ರಿಜಿಸ್ಟ್ರಾರ್‌ ಜನರಲ್‌'ಗಳು ಈ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸಲಿದ್ದಾರೆ. * ಪ್ರಧಾನಿ ಮೋದಿ ಅವರು ಇದೇ ಜನೆವರಿ. 5ರಂದು ಪಂಜಾಬ್‌ ರಾಜ್ಯಕ್ಕೆ ಭೇಟಿ ನೀಡಿದ್ದ ಸಂಧರ್ಭದಲ್ಲಿ ಪ್ರತಿಭಟನಕಾರರು ರಸ್ತೆ ತಡೆದಿದ್ದ ಕಾರಣದಿಂದಾಗಿ, ಪಂಜಾಬ್‌ನ ಫಿರೋಜ್‌ಪುರ ಹತ್ತಿರದ ಫ್ಲೈಓವರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಆ ದಿನದಂದು ಸುಮಾರು 20 ನಿಮಿಷಗಳ ಕಾಲ ಫ್ಲೈಓವರ್‌ನಲ್ಲಿ ಸಿಲುಕಿಕೊಂಡಿದ್ದರು, ಈ ಘಟನೆ ಸಂಭವಿಸಿದ ಬಳಿಕ ಪಂಜಾಬ್ ರಾಜ್ಯದಲ್ಲಿ ಆಯೋಜಿಸಲಾಗಿದ್ದ ರ‍್ಯಾಲಿಯಲ್ಲಿ ಪ್ರಧಾನಿಯವರು ಪಾಲ್ಗೊಳ್ಳದೇ ವಾಪಾಸ್ ಆಗಿದ್ದರು. * ಪಂಜಾಬ್‌ ಪೊಲೀಸರು ಪ್ರಧಾನಿ ಮೋದಿ ಅವರಿಗೆ ಒದಗಿಸಿರುವ ಭದ್ರತೆಯಲ್ಲಿ ಲೋಪ ಉಂಟಾಗಿದೆ ಎಂದು ಲಾಯರ್ಸ್‌ ವಾಯ್ಸ್‌ ಸಂಸ್ಥೆಯು ಸಲ್ಲಿಸಿದ ಅರ್ಜಿಯಲ್ಲಿ ತಿಳಿಸಲಾಗಿದೆ. * ಇಂದು ಮಲ್ಹೋತ್ರಾ: ಪ್ರಸ್ತುತ ಇವರು ನಿವೃತ್ತ ನ್ಯಾಯಾಧೀಶರು ಹಾಗೂ ಭಾರತದ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರಾಗಿದ್ದಾರೆ. ಇವರು ಸುಪ್ರೀಂ ಕೋರ್ಟ್‌ನಿಂದ ಹಿರಿಯ ವಕೀಲರಾಗಿ ನೇಮಕಗೊಂಡ 2ನೇ ಮಹಿಳೆಯಾಗಿದ್ದಾರೆ. ಇಂದು ಮಲ್ಹೋತ್ರಾ ಅವರು ಬಾರ್‌ನಿಂದ ನೇರವಾಗಿ ಭಾರತದ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ಉನ್ನತೀಕರಿಸಲ್ಪಟ್ಟ ಮೊದಲ ಮಹಿಳಾ ವಕೀಲರಾಗಿದ್ದಾರೆ. * ಈ ಹಿಂದೆ 1983 ರಲ್ಲಿ ಇಂದು ಮಲ್ಹೋತ್ರಾ ಅವರು ವಕೀಲ ವೃತ್ತಿಗೆ ಸೇರಿಕೊಂಡರು, ಮತ್ತೇ 1988 ರಲ್ಲಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಅಡ್ವೊಕೇಟ್-ಆನ್-ರೆಕಾರ್ಡ್ ಆಗಿ ಅರ್ಹತೆಯನ್ನು ಪಡೆದು ಅಲ್ಲಿನ ಪರೀಕ್ಷೆಯಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡರು, ಈ ಹಿನ್ನಲೆಯಿಂದಾಗಿ ಇವರಿಗೆ ರಾಷ್ಟ್ರೀಯ ಕಾನೂನು ದಿನದಂದು ಮುಖೇಶ್ ಗೋಸ್ವಾಮಿ ಸ್ಮಾರಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. * ಇಂದು ಮಲ್ಹೋತ್ರಾ ಅವರು ಸುಮಾರು 30 ವರ್ಷಗಳ ಕಾಲ ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಸಲಹೆಗಾರರಾಗಿ ಕಾರ್ಯ ನಿರ್ವಹಿಸಿದ್ದಾರೆ, ನಂತರ ಇವರನ್ನು 2018 ರ ಏಪ್ರಿಲ್. 26 ರಂದು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕ ಮಾಡಲು ಶಿಫಾರಸು ಮಾಡಲಾಯಿತು. ಕಳೆದ ವರ್ಷ 2021 ರ ಮಾರ್ಚ್. 13 ರಂದು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ಸ್ಥಾನದಿಂದ ನಿವೃತ್ತರಾಗಿದ್ದಾರೆ.