Job Description: * ಇದೀಗ ದೇಶದಲ್ಲೇ‌ ಮೊದಲ ಬಾರಿಗೆ ನಿಮ್ಹಾನ್ಸ್ ಸಂಸ್ಥೆಯು ನೀತಿ ಆಯೋಗ ಮತ್ತು ಆರೋಗ್ಯ ಇಲಾಖೆಯ ಸಹಾಯದ ಅಡಿಯಲ್ಲಿ "ಕರ್ನಾಟಕ ಮೆದುಳು ಆರೋಗ್ಯ ಕಾರ್ಯಕ್ರಮ"ವನ್ನು (ಕರ್ನಾಟಕ ಬ್ರೇನ್ ಹೆಲ್ತ್ ಇನೀಶಿಯೇಟಿವ್) ಜಾರಿ ಮಾಡಲಾಗಿದೆ. ರಾಜ್ಯ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಈ ಕಾರ್ಯಕ್ರಮಕ್ಕೆ ವಿಡಿಯೋ ಕಾನ್ಫರನ್ಸ್ ಮೂಲಕ ಚಾಲನೆ ನೀಡಿದ್ದಾರೆ. * ಪ್ರಸ್ತುತ ನಿಮ್ಹಾನ್ಸ್ ನಿಂದ ಈ ಕರ್ನಾಟಕ ಬ್ರೇನ್ ಹೆಲ್ತ್ ಇನೀಶಿಯೇಟಿವ್ ಕಾರ್ಯಕ್ರಮವನ್ನು ಪ್ರಾಯೋಗಿಕವಾಗಿ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಜಾರಿ ಮಾಡಲಾಗಿದೆ. ಈ ಕಾರ್ಯಕ್ರಮವು ಮಾನಸಿಕ ರೋಗಗಳ ತಪಾಸಣೆಯನ್ನು ಮಾಡಲು ಮತ್ತು ಚಿಕಿತ್ಸೆ ನೀಡುವ ಬಗ್ಗೆ ವೈದ್ಯರಿಗೆ ತರಬೇತಿ ಕಲ್ಪಿಸಲಾಗುತ್ತದೆ. * ಪ್ರಸ್ತುತ ಮಾನಸಿಕ ಆರೋಗ್ಯವು ದೈಹಿಕ ಆರೋಗ್ಯದ ಮೇಲೆ ಪರಿಣಾಮವನ್ನು ಬೀರುತ್ತದೆ, ಈ ದೃಷ್ಟಿಯಿಂದ ಮೆದುಳಿನ ಆರೋಗ್ಯವು ಇಡೀ ದೇಹದ ಒಟ್ಟು ಆರೋಗ್ಯ ಕಾಪಾಡಲು ಅಗತ್ಯವಾಗಿರುತ್ತದೆ. ಈ ನಿಮ್ಹಾನ್ಸ್ ಸಂಸ್ಥೆಯು ಜನರ ಹತ್ತಿರ ಹೋಗಿ ಆರೋಗ್ಯ ಸೇವೆ ನೀಡುವಂತಹ ಸಂಸ್ಥೆಯಾಗಿದೆ. ಈ ನಿಮ್ಹಾನ್ಸ್ ಸಂಸ್ಥೆಯು ಸಾಮಾನ್ಯ ಫಿಸಿಶೀಯನ್ ಕೂಡ ಮಾನಸಿಕ ಆರೋಗ್ಯ ಸೇವೆ ಒದಗಿಸುವ ತರಬೇತಿ ನೀಡಲಿದೆ ಎಂದಿದ್ದಾರೆ. * ಪ್ರಸ್ತುತ ಕರ್ನಾಟಕ ರಾಜ್ಯದಲ್ಲಿ ಸರಿ ಸುಮಾರು 2 ಲಕ್ಷ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಈ ಎಲ್ಲ ವೈದ್ಯರನ್ನು ಬಳಸಿಕೊಂಡು ಮಾನಸಿಕ ಅನಾರೋಗ್ಯಗಳಿಗೆ ಪರಿಹಾರವನ್ನು ಒದಗಿಸಬೇಕಾಗಿದೆ ಎಂದು ತಿಳಿಸಿದ್ದಾರೆ. ಇದೀಗ ರಾಜ್ಯ ಸರ್ಕಾರಕ್ಕೆ ಈ ಪ್ರಾಯೋಗಿಕ ಕಾರ್ಯಕ್ರಮವನ್ನು ಉತ್ತಮವಾಗಿ ಜಾರಿ ಮಾಡಿ ಅದರ ಎಲ್ಲ ಮಾಹಿತಿಯನ್ನು ಸವಿಸ್ತಾರವಾಗಿ ನೀಡಬೇಕು. ಇದರಿಂದಾಗಿ ಮುಂದಿನ ಬಜೆಟ್'ನಲ್ಲಿ ಈ ಕಾರ್ಯಕ್ರಮಕ್ಕೆ ಹೆಚ್ಚಿನ ಅನುದಾನ ಮೀಸಲಿಡಲಾಗುವದು ಎಂದು ತಿಳಿಸಿದ್ದಾರೆ. * ಪ್ರಸ್ತುತ ಆರೋಗ್ಯ ಇಲಾಖೆಯಿಂದ ವಿಷನ್ ವರದಿಯನ್ನು ರಚಿಸಲಿದೆ. ಹಾಗೂ ಮುಂದಿನ 20 ವರ್ಷಗಳಲ್ಲಿ ಕರ್ನಾಟಕ ರಾಜ್ಯವು ಯಾವ ರೀತಿಯಲ್ಲಿ ಸ್ವಾಸ್ಥ್ಯ ರಾಜ್ಯವಾಗಬೇಕು ಎಂಬುವದನ್ನು '3' ಹಂತಗಳ ಆರೋಗ್ಯ ವ್ಯವಸ್ಥೆಯ ಬಲವರ್ಧನೆ ಮಾಡಲು ರಚಿಸಲಾಗುತ್ತದೆ. ಈ ವಿಷನ್ ವರದಿಯನ್ನು ರೂಪಿಸುವ ಸಮಿತಿಯ ಸುಮಾರು 30 ಹಿರಿಯರನ್ನು ಒಳಗೊಂಡಿದೆ. ಈ ವಿಷನ್'ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಜನವರಿ. 28 ಕ್ಕೆ ಬಿಡುಗಡೆ ಮಾಡಲಿದ್ದಾರೆ. * * ನಿಮ್ಹಾನ್ಸ್ ಸಂಸ್ಥೆ : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ-ಸೈನ್ಸ್ ಇದೊಂದು ಭಾರತದ ಬೆಂಗಳೂರಿನಲ್ಲಿರುವ ವೈದ್ಯಕೀಯ ಸಂಸ್ಥೆಯಾಗಿದೆ. ನಿಮ್ಹಾನ್ಸ್ ದೇಶದ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಶಿಕ್ಷಣದ ಉನ್ನತ ಕೇಂದ್ರವಾಗಿದೆ. ಅಷ್ಟೇ ಅಲ್ಲದೇ ಇದೊಂದು ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆಯಾಗಿದೆ,ಹಾಗೂ ಇದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಸ್ವಾಯತ್ತವಾಗಿ ಕಾರ್ಯನಿರ್ವಹಿಸುತ್ತದೆ. * ಪ್ರಸ್ತುತ ಈ ನಿಮ್ಹಾನ್ಸ್ ವೈದ್ಯಕೀಯ ಸಂಸ್ಥೆಯು ಭಾರತದಲ್ಲಿ 4ನೇ ಅತ್ಯುತ್ತಮ ವೈದ್ಯಕೀಯ ಸಂಸ್ಥೆಯಾಗಿದೆ. * ಭಾರತ ಸರ್ಕಾರವು ಈ ಹಿಂದೆ 1954 ರಲ್ಲಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (NIMHANS) ಸ್ಥಾಪಿಸಿದೆ. ಹಾಗೂ 1994 ರ ನವೆಂಬರ್. 14 ರಂದು ನಿಮ್ಹಾನ್ಸ್ ಶೈಕ್ಷಣಿಕ ಸ್ವಾಯತ್ತತೆಯೊಂದಿಗೆ ವಿಶ್ವವಿದ್ಯಾಲಯ ಅನುದಾನ ಆಯೋಗದಿಂದ ಡೀಮ್ಡ್ ವಿಶ್ವವಿದ್ಯಾಲಯ ಸ್ಥಾನಮಾನವನ್ನು ಈ ಸಂಸ್ಥೆಗೆ ನೀಡಲಾಯಿತು. ಮತ್ತೇ 2012 ರಲ್ಲಿ ಸಂಸತ್ತಿನ ಕಾಯಿದೆಯ ಅಡಿಯಲ್ಲಿ ಈ ಸಂಸ್ಥೆಯನ್ನು ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆ ಎಂದು ಘೋಷಣೆ ಮಾಡಲಾಯಿತು. ಭಾರತ ಸರ್ಕಾರವು 2017 ರ ಮಾರ್ಚ್ ನಲ್ಲಿ ಮಾನಸಿಕ ಆರೋಗ್ಯ ರಕ್ಷಣೆ ಮಸೂದೆ 2016 ನ್ನು ಅಂಗೀಕರಿಸಿ ರಾಷ್ಟ್ರದಾದ್ಯಂತ ನಿಮ್ಹಾನ್ಸ್-ತರಹದ ಸಂಸ್ಥೆಗಳನ್ನು ಸ್ಥಾಪನೆ ಮಾಡಲು ಪ್ರಸ್ತಾವನೆಯನ್ನು ನೀಡಲಾಯಿತು.