Job Description: * ಈ ಹಿಂದೆ 2021 ರ ಡಿಸೆಂಬರ್ ನಲ್ಲಿ ಕೇಂದ್ರ ಸರ್ಕಾರ ಮುಖ್ಯ ಆರ್ಥಿಕ ಸಲಹೆಗಾರರಾಗಿದ್ದ ಕೆ.ವಿ.ಸುಬ್ರಮಣಿಯನ್ ಅವರು ಇದೀಗ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೀಗ ಅವರ ಸ್ಥಾನಕ್ಕೆ ಡಾ. ವಿ.ಅನಂತ ನಾಗೇಶ್ವರನ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಆದೇಶ ಹೊರಡಿಸಿದೆ. * ಡಾ. ವಿ. ಅನಂತ ನಾಗೇಶ್ವರನ್ ಅವರೊಬ್ಬ ಭಾರತೀಯ ಅರ್ಥಶಾಸ್ತ್ರಜ್ಞ ಹಾಗೂ ಭಾರತ ಸರ್ಕಾರದ 18 ನೇ ಮುಖ್ಯ ಆರ್ಥಿಕ ಸಲಹೆಗಾರರಾಗಿದ್ದಾರೆ. ಇವರು 2019 ಹಾಗೂ 2021 ರ ನಡುವೆ ಆರ್ಥಿಕ ಸಲಹಾ ಮಂಡಳಿಯ ಅರೆಕಾಲಿಕ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ. * ನಾಗೇಶ್ವರನ್ ಅವರು 1983 ರಲ್ಲಿ ಮಧುರೈನ ಅಮೇರಿಕನ್ ಕಾಲೇಜಿನಿಂದ ಪದವಿ ಪಡೆದುಕೊಂಡಿದ್ದಾರೆ, ಮತ್ತೇ 1986 ರಲ್ಲಿ ಅವರು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಹಮದಾಬಾದ್‌'ನಿಂದ ಮ್ಯಾನೇಜ್‌ಮೆಂಟ್‌ನಲ್ಲಿ ಸ್ನಾತಕೋತ್ತರ ಡಿಪ್ಲೊಮಾವನ್ನು ಪಡೆದುಕೊಂಡಿದ್ದಾರೆ. ನಂತರ ಮ್ಯಾಸಚೂಸೆಟ್ಸ್ ಅಮ್ಹೆರ್ಸ್ಟ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಸಹ ಪಡೆದುಕೊಂಡಿದ್ದಾರೆ. ಇವರು ಸಿಂಗಾಪುರ್ ಮ್ಯಾನೇಜ್‌ಮೆಂಟ್ ವಿಶ್ವವಿದ್ಯಾಲಯ ಹಾಗೂ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು ಹಾಗೂ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಇಂದೋರ್‌ನಲ್ಲಿ ಪದವಿ ವಿದ್ಯಾರ್ಥಿಗಳಿಗೆ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. * ಸ್ವಿಟ್ಜರ್ಲೆಂಡ್ ಮತ್ತು ಸಿಂಗಾಪುರದಲ್ಲಿ ಕ್ರೆಡಿಟ್ ಸ್ಯೂಸ್ ಗ್ರೂಪ್ ಎಜಿ ಹಾಗೂ ಜೂಲಿಯಸ್ ಬೇರ್ ಗ್ರೂಪ್‌ನೊಂದಿಗೆ ನಾಗೇಶ್ವರನ್ ಅವರು ಕೆಲಸ ಮಾಡಿದ್ದಾರೆ. ಇವರು ತಕ್ಷಶಿಲಾ ಸಂಸ್ಥೆಯನ್ನು ಸಹ-ಸ್ಥಾಪಿಸಿದ್ದಾರೆ. ಇವರು 2019 ರಿಂದ 2021 ರವರೆಗೆ ಪ್ರಧಾನ ಮಂತ್ರಿಯ ಆರ್ಥಿಕ ಸಲಹಾ ಮಂಡಳಿಯ ಅರೆಕಾಲಿಕ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು. * 2022 ಜನವರಿ. 28 ರಂದು ನಾಗೇಶ್ವರನ್ ಅವರನ್ನು ಭಾರತ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾಗಿ ನೇಮಿಸಲಾಗಿದೆ.