Job Description: * ಪ್ರಸ್ತುತ ರಾಜ್ಯ ಪೊಲೀಸ್ ಪಡೆಗಳ ಆಧುನೀಕರಣದ ಯೋಜನೆಗೆ ಕೇಂದ್ರ ಸರ್ಕಾರವು 2021-2022 ರಿಂದ 2025-2026 ರ ಅವಧಿಗೆ ಅನುಮೋದನೆ ನೀಡಿದೆ. ಈ ಯೋಜನೆಯು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಇರುವ ಪೊಲೀಸ್ ಪಡೆಗಳನ್ನು ಆಧುನೀಕರಿಸುವ ಹಾಗೂ ಸುಧಾರಣೆ ತರುವ ಯೋಜನೆಯಾಗಿದೆ. ಈ ಯೋಜನೆಯು ಮುಂದಿನ '5' ವರ್ಷಗಳ ಕಾಲ ಮುಂದುವರಿಯುಲಿದೆ ಎಂದಿದ್ದಾರೆ. ಇದೀಗ ಕೇಂದ್ರ ಸರ್ಕಾರವು ಈ ಯೋಜನೆಗೆ ಒಟ್ಟು 26,275 ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ ಎಂದು ತಿಳಿಸಿದೆ. * ಪ್ರಸ್ತುತ ಈ ರಾಜ್ಯ ಪೊಲೀಸ್ ಪಡೆಗಳ ಆಧುನೀಕರಣ (MPF) ಯೋಜನೆಯಡಿಯಲ್ಲಿ, ಕಾನೂನು ಸುವ್ಯವಸ್ಥೆ, ಆಂತರಿಕ ಭದ್ರತೆ, ಹೊಸ ತಂತ್ರಜ್ಞಾನವನ್ನು ಪೊಲೀಸರು ಅಳವಡಿಸಿಕೊಳ್ಳುವುದು, ಮಾದಕ ದ್ರವ್ಯ ನಿಯಂತ್ರಣಕ್ಕೆ ಸಹಾಯ ಮಾಡುವ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಅವಕಾಶವನ್ನು ನೀಡಲಾಗಿದೆ. ಇದ್ದಕ್ಕಾಗಿ ಭಾರತದಲ್ಲಿ ದೃಢವಾದ ಫೋರೆನ್ಸಿಕ್ ಸೆಟಪ್'ನ್ನು ವಿನ್ಯಾಸಗೊಳಿಸಲಾಗಿದೆ, ಇದರಿಂದಾಗಿ ಅಪರಾಧ ನ್ಯಾಯ ವ್ಯವಸ್ಥೆಯನ್ನು ಬಲಿಷ್ಠಗೊಳಿಸುವ ಗುರಿಯನ್ನು ಸರ್ಕಾರವು ಹೊಂದಿದೆ. * ಈ ಯೋಜನೆಯಿಂದಾಗಿ ಫೋರೆನ್ಸಿಕ್ ಸಾಮರ್ಥ್ಯಗಳನ್ನು ಸುಧಾರಿಸಲು ಕೇಂದ್ರ ಸರ್ಕಾರವು 2,080.50 ಕೋಟಿ ರೂ. ಅನುಮೋದನೆ ನೀಡಿದೆ. ಪ್ರಸ್ತುತ ಬಂಡಾಯ ಬಾಧಿತ ಈಶಾನ್ಯ ರಾಜ್ಯಗಳು, ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶಗಳು ಹಾಗೂ ಎಡಪಂಥೀಯ ಉಗ್ರವಾದ ಪೀಡಿತ ಪ್ರದೇಶಗಳಲ್ಲಿ ಭದ್ರತೆಯ ವೆಚ್ಚಗಳಿಗಾಗಿ 18,839 ಕೋಟಿ ರೂ. ಗಳನ್ನು ನಿಗದಿಪಡಿಸಲಾಗಿದೆ. ಹಾಗೂ ಮಾವೋವಾದಿ ದಂಗೆಯ ವಿರುದ್ಧ ಹೋರಾಡಲು ರಾಷ್ಟ್ರೀಯ ನೀತಿ ಹಾಗೂ ಕ್ರಿಯಾ ಯೋಜನೆಯ ಅನುಷ್ಠಾನದಿಂದಾಗಿ ಉಗ್ರವಾದ ಪೀಡಿತ ಪ್ರದೇಶಗಳಲ್ಲಿ ಹಿಂಸಾತ್ಮಕ ಘಟನೆಗಳು ತೀವ್ರವಾಗಿ ಕಡಿಮೆ ಮಾಡಲಾಗುತ್ತದೆ. ಪ್ರಸ್ತುತ ಕೇಂದ್ರವು 8,689 ಕೋಟಿ ರೂ. ವೆಚ್ಚದ ಈ ಯೋಜನೆಗಳು ಹೆಚ್ಚಿನ ಉಗ್ರವಾದ ಪೀಡಿತ ಜಿಲ್ಲೆಗಳಿಗೆ ವಿಶೇಷ ಕೇಂದ್ರ ಸಹಾಯವನ್ನು ನೀಡಲಾಗುತ್ತದೆ ಹಾಗೂ ಲಾಭಗಳನ್ನು ಕ್ರೋಢೀಕರಿಸಲಾಗುತ್ತದೆ. * ಇಂಡಿಯಾ ರಿಸರ್ವ್ ಬೆಟಾಲಿಯನ್‌ (IRB) ಗಳು ಹಾಗೂ ವಿಶೇಷ ಭಾರತೀಯ ರಿಸರ್ವ್ ಬೆಟಾಲಿಯನ್‌ಗಳನ್ನು ಹೆಚ್ಚಿಸಲು 350 ಕೋಟಿ ರೂ. ಗಳನ್ನು ನಿಗದಿಪಡಿಸಲಾಗಿದೆ. ಇದೀಗ 50 ಕೋಟಿ ರೂ. ವೆಚ್ಚದಲ್ಲಿ ಕೇಂದ್ರ ಸರ್ಕಾರವು ಮಾದಕ ದ್ರವ್ಯ ನಿಯಂತ್ರಣಕ್ಕಾಗಿ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಯೋಜನೆಯನ್ನು ವಿಸ್ತರಿಸಿದೆ. * ಕೇಂದ್ರದ ಈ ಅಂಬ್ರೆಲಾ ಯೋಜನೆಯಡಿಯಲ್ಲಿ, ಅಪರಾಧ ಹಾಗೂ ಅಪರಾಧಿಗಳ ದಾಖಲೆಗಳ ರಾಷ್ಟ್ರೀಯ ಡೇಟಾ ಬೇಸ್ ನ್ನು ಸ್ಥಾಪಿಸಲು ಪೊಲೀಸ್ ಠಾಣೆಗಳನ್ನು ಸಂಯೋಜಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.