Job Description: * ಪ್ರಸ್ತುತ ನೀನಾ ಬನ್ಸಾಲ್ ಕೃಷ್ಣ, ದಿನೇಶ್ ಕುಮಾರ್ ಶರ್ಮಾ, ಅನೂಪ್ ಕುಮಾರ್ ಮೆಂಡಿರಟ್ಟಾ ಹಾಗೂ ಸುಧೀರ್ ಕುಮಾರ್ ಜೈನ್ ಎಂಬ ನಾಲ್ಕು ನ್ಯಾಯಮೂರ್ತಿಗಳು ಇತ್ತೀಚಿಗೆ ದೆಹಲಿ ಹೈಕೋರ್ಟ್‌ ನ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇವರಿಗೆ ಪ್ರಮಾಣ ವಚನವನ್ನು ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ಎನ್ ಪಟೇಲ್ ಅವರು ಬೋಧಿಸಿದ್ದಾರೆ. * ಈ ನ್ಯಾಯಮೂರ್ತಿಗಳು ಪ್ರಮಾಣ ವಚನ ಸ್ವೀಕರಿಸುವ ಮೂಲಕ ಭಾರತದ ನ್ಯಾಯಾಂಗಕ್ಕೆ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ 34 ನ್ಯಾಯಾಧೀಶರನ್ನು ಒಳಗೊಂಡಿದೆ. * ಇತ್ತೀಚಿಗೆ ಕಾನೂನು ಹಾಗೂ ನ್ಯಾಯ ಸಚಿವಾಲಯವು ದೆಹಲಿಯ ಹೈಕೋರ್ಟ್‌ಗಳಿಗೆ ನಾಲ್ಕು ಹೊಸ ನ್ಯಾಯಾಧೀಶರ ನೇಮಕಾತಿಗೆ ಅಧಿಸೂಚನೆಯನ್ನು ನೀಡಿತ್ತು. ಈ ಹಿನ್ನಲೆಯಿಂದಾಗಿ ಮೇಲೆ ತಿಳಿಸಿರುವ ನಾಲ್ಕು ನ್ಯಾಯಮೂರ್ತಿಗಳನ್ನೂ ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರನ್ನಾಗಿ ನೇಮಕ ಮಾಡಿ ಕಚೇರಿಗಳ ಉಸ್ತುವಾರಿಯನ್ನು ವಹಿಸಲಾಗಿದೆ. * ಭಾರತದ ಕಾನೂನು ಕಾರ್ಯದರ್ಶಿಯಾಗಿ ನ್ಯಾಯಮೂರ್ತಿ ಅನೂಪ್ ಕುಮಾರ್ ಮೆಂಡಿರಟ್ಟ ಅವರನ್ನು ನಿಯೋಜನೆ ಮಾಡಲಾಗಿದೆ. ಇವರು ಈ ಮೊದಲು ಈಶಾನ್ಯ ದೆಹಲಿ ಜಿಲ್ಲಾ ನ್ಯಾಯಾಲಯದ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಹಾಗೂ ದೆಹಲಿ ಸರ್ಕಾರದ ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. * ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರನ್ನು ನವದೆಹಲಿ ಜಿಲ್ಲಾ ನ್ಯಾಯಾಲಯದ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಇವರು 2017 ರ ಮೇ. 1 ರಿಂದ 2020 ರ ಜನವರಿ. 6 ರವರೆಗೆ ದೆಹಲಿ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. * ನ್ಯಾಯಮೂರ್ತಿ ಸುಧೀರ್ ಕುಮಾರ್ ಜೈನ್ ಅವರು ಈ ಮೊದಲು ರೋಸ್ ಅವೆನ್ಯೂ ನ್ಯಾಯಾಲಯದ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸುತ್ತಿದ್ದರು. * ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು ಆಗ್ನೇಯ ಜಿಲ್ಲಾ ನ್ಯಾಯಾಲಯದಲ್ಲಿ ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸುತ್ತಿದ್ದರು. * ಇತ್ತೀಚಿಗೆ ಸುಪ್ರೀಂ ಕೋರ್ಟ್ ಕೊಲಿಜಿಯಂ 2022 ರ ಫೆಬ್ರವರಿ. 01 ರಂದು ಜರುಗಿರುವ ಸಭೆಯಲ್ಲಿ ದೆಹಲಿ ಹೈಕೋರ್ಟ್‌ನಲ್ಲಿ '6' ನ್ಯಾಯಾಂಗ ಅಧಿಕಾರಿಗಳನ್ನು ನ್ಯಾಯಮೂರ್ತಿಗಳಾಗಿ ಮೇಲ್ದರ್ಜೆಗೆರಿಸುವ ಪ್ರಸ್ತಾವನೆಯನ್ನು ನೀಡಿತ್ತು.