Job Description: * ಸಿದ್ದು ಪೂರ್ಣಚಂದ್ರರವರು ಕಥೆ, ಚಿತ್ರಕಥೆ ಬರೆದು ಬ್ರಹ್ಮ ಕಮಲ ಚಿತ್ರವನ್ನು ನಿರ್ದೇಶಿಸಿದ್ದು, ಜೊತೆಗೆ ಸಿದ್ದು ಪೂರ್ಣಚಂದ್ರ ಅವರೇ ಈ ಚಿತ್ರವನ್ನು ನಿರ್ಮಾಣ ಕೂಡ ಮಾಡಿದ್ದಾರೆ. ಸದ್ಯ ಪೋಸ್ಟರ್ ಮೂಲಕ ಕುತೂಹಲ ಹುಟ್ಟಿಸಿರೋ ಈ ಸಿನಿಮಾ ಕೂಡ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದೆ.* ಕನ್ನಡ ಚಿತ್ರರಂಗದಲ್ಲಿ ಭರವಸೆ ಹುಟ್ಟಿಸಿರೋ ನಿರ್ದೇಶಕರಾದ ಸಿದ್ದು ಪೂರ್ಣಚಂದ್ರ ರವರ ಮೊದಲ ಚಿತ್ರವಾದ 'ದಾರಿ ಯಾವುದಯ್ಯ ವೈಕುಂಠಕೆ' ಎಂಬ ಈ ಚಿತ್ರಕ್ಕೆ ಸಾಕಷ್ಟು ಪ್ರಶಸ್ತಿಗಳ ಜೊತೆಗೆ ಹಲವಾರು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳುವ ಮುಖಾಂತರ ಸಿನಿ ಪ್ರೇಕ್ಷಕರರ ಮೆಚ್ಚುಗೆ ಪಾತ್ರವಾಗಿತ್ತು‌. * 'ಬ್ರಹ್ಮ ಕಮಲ' ಚಿತ್ರವು ಹಲವಾರು ತಾರಾಬಳಗವನ್ನು ಹೊಂದಿದ್ದು, ಮಹಿಳಾ ಪ್ರಧಾನ ಚ್ತ್ರವಾಗಿದೆ. ಅದ್ವಿತಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಲೋಕೇಂದ್ರ ಸೂರ್ಯ, ಋತು ಚೈತ್ರ, ಮಮತಾ ರಾಹುತ್, ಪ್ರಮಿಳಾ ಸುಬ್ರಹ್ಮಣ್ಯ, ಬಲ ರಾಜ್ವಾಡಿ, ಸಿದ್ದು ಪೂರ್ಣಚಂದ್ರ, ಆಟೋ ನಾಗರಾಜ್, ಗಂಡಸಿ ಸದಾನಂದ ಸ್ವಾಮಿ, ಕವಿತಾ ಕಂಬಾರ್, ರಾಧಾ ರಾಮಚಂದ್ರ ಇನ್ನೂ ಅನೇಕರು ಈ ಚಿತ್ರದಲ್ಲಿ ನಟಿಸಿದ್ದಾರೆ.