* ವರಕವಿ ಡಾ. ದ.ರಾ.ಬೇಂದ್ರೆಯವರ 129ನೇ ಜನ್ಮದಿನದ ನಿಮಿತ್ತ ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ಕೊಡಲಾಗುವ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿಗೆ ನವೋದಯ ಸಾಹಿತಿ ಡಾ.ವೀಣಾ ಶಾಂತೇಶ್ವರ ಮತ್ತು ಬೆಂಗಳೂರಿನ ಕವಿ, ವಿಮರ್ಶಕ ಪ್ರೊ. ಎಸ್.ಜಿ. ಸಿದ್ಧರಾಮಯ್ಯ ಅವರು ಭಾಜನರಾಗಿದ್ದಾರೆ.* ಜ. 31ರಂದು ಸಾಧನಕೇರಿಯ ಬೇಂದ್ರೆ ಸಭಾಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಇಬ್ಬರು ಸಾಹಿತಿಗಳಿಗೆ ತಲಾ 50 ಸಾವಿರ ನಗದು, ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುತ್ತಿದೆ ಎಂದು ಬೇಂದ್ರೆ ಟ್ರಸ್ಟ್ ಅಧ್ಯಕ್ಷ ಡಾ. ಡಿ.ಎಂ. ಹಿರೇಮಠ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.