* ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯ್ಲಿ ಬರೆದ “ವಿಶ್ವ ಸಂಸ್ಕೃತಿಯ ಮಹಾಯಾನ” ಗದ್ಯ ಮಹಾಕಾವ್ಯದ ಸಂಪುಟ-2 ರ ಬಿಡುಗಡೆ ರವಿವಾರ(ಜನವರಿ 12) ಬೆಳಗ್ಗೆ 11ಕ್ಕೆ ಮೂಡಬಿದರಿಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿಜರುಗಲಿದೆ.* ಈ ಕಾರ್ಯಕ್ರಮವು ಮೂಡುಬಿದಿರೆ ಶ್ರೀ ಜೈನ ಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ಡಾ. ಎಂ. ಮೋಹನ ಆಳ್ವ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.* ಮಾಜಿ ಸಚಿವ ಕೆ. ಅಭಯಚಂದ್ರ ಮಾತನಾಡಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮತ್ತು ಸಪ್ನ ಬುಕ್ ಹೌಸ್ ಸಂಯುಕ್ತವಾಗಿ ಆಯೋಜಿಸಿರುವ ಈ ಸಮಾರಂಭದ ಅಧ್ಯಕ್ಷತೆಯನ್ನು ಡಾ. ಎಂ. ಮೋಹನ ಆಳ್ವ ವಹಿಸಲಿದ್ದು, ಮೈಸೂರು ವಿ.ವಿ. ನಿವೃತ್ತ ಪ್ರಾಧ್ಯಾಪಕ ಪ್ರೊ. ಸಿ. ನಾಗಣ್ಣ ಗ್ರಂಥವನ್ನು ಬಿಡುಗಡೆಮಾಡಲಿದ್ದಾರೆ.* ಹಂಪಿ ಕನ್ನಡ ವಿವಿಯ ವಿಶ್ರಾಂತ ಕುಲಪತಿ ಡಾ. ಬಿ.ಎ. ವಿವೇಕ ರೈ ಆಶಯನುಡಿ ನೀಡಲಿದ್ದಾರೆ. ಮೈಸೂರಿನ ಡಾ.ಕಬ್ಬಿನಾಲೆ ವಸಂತ ಭಾರಧ್ವಾಜ ಅವರ ಗ್ರಂಥದ ಕುರಿತು ಡಾ.ಎಂ.ವೀರಪ್ಪ ಮೊಯ್ಲಿ ಮಾತನಾಡಲಿದ್ದಾರೆ. ಕಾರ್ಕಳದ ಕೃಷ್ಣಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.