* ಕರ್ನಾಟಕ ರಾಜ್ಯ ಏಕೀಕರಣಕ್ಕೆ 69 ವರ್ಷ ತುಂಬಿದ ಸಂದರ್ಭದಲ್ಲಿ ಕರ್ನಾಟಕ ಮಾಧ್ಯಮ ಸಹಕಾರ ಹಾಗೂ ದಿ ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಬೆಂಗಳೂರು ಇದರ ವತಿಯಿಂದ ನೀಡಲಾಗುವ ಪ್ರತಿಷ್ಠಿತ ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿ-2024 ಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಆಯ್ಕೆಯಾದ್ದಾರೆ.* ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ದಿನಾಂಕ 27-11-2024ರಂದು ಬೆಂಗಳೂರು ನಗರದ ಜೆ.ಸಿ.ರಸ್ತೆ ಯಲ್ಲಿರುವ ಸರ್. ಪುಟ್ಟಣ್ಣ ಚೆಟ್ಟಿ ಪುರಭವನ (ಟೌನ್ ಹಾಲ್) ದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.* ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಸಂಸ್ಥೆ 69ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪತ್ರಿಕೋದ್ಯಮದ ಇತಿಹಾಸದಲ್ಲಿ ಮೊದಲ ಬಾರಿಗೆ ನೀಡುವ ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿಗೆ ಸಹಕಾರ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿರುವ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಶ್ರಾವಣ ಲಕ್ಷ್ಮಣ್ ಅಭಿನಂದನಾ ಪತ್ರದ ಮೂಲಕ ತಿಳಿಸಿದ್ದಾರೆ.* ಸಹಕಾರಿ ರಂಗದಲ್ಲಿ ಹೊಸ ಹೊಸ ಅವಿಷ್ಕಾರದೊಂದಿಗೆ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಾ, ರಾಜ್ಯ-ರಾಷ್ಟ್ರ ಮಟ್ಟದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್ ) ಘನತೆ, ಗೌರವವನ್ನು ತಂದುಕೊಟ್ಟ ಡಾ. ಎಂ ಎನ್.ರಾಜೇಂದ್ರ ಕುಮಾರ್ ಕಳೆದ 30 ವರ್ಷಗಳಿಂದ ಎಸ್ ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾಗಿ ಬ್ಯಾಂಕಿನ ಸರ್ವಾಂಗೀಣ ಪ್ರಗತಿಗೆ ಕಾರಣರಾಗಿದ್ದಾರೆ.* ಎಸ್ ಸಿಡಿಸಿಸಿ ಬ್ಯಾಂಕ್ ಮೂಲಕ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನೇ ಮಾಡಿರುವ ರಾಜೇಂದ್ರ ಕುಮಾರ್ ಅವರು ಈ ಬ್ಯಾಂಕ್‌ನ್ನು ‘ಜನಸ್ನೇಹಿ’ ಬ್ಯಾಂಕನ್ನಾಗಿ ರೂಪಿಸಿದ ಹೆಗ್ಗಳಿಕೆಗೆ ಪಾತ್ರರಾಗಿರುವರು. ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕಿಂಗ್ ಸೇವೆಯ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸಿ ಸಹಕಾರಿ ರಂಗಕ್ಕೆ ಹೊಸ ಆಯಾಮವನ್ನು ತಂದುಕೊಟ್ಟ ಇವರು ಕೋರ್ ಬ್ಯಾಂಕಿಂಗ್‌ನಂತಹ ಉತ್ಕೃಷ್ಟ ತಂತ್ರಜ್ಞಾನವನ್ನು ಎಸ್‌ಸಿಡಿಸಿ ಸಿ ಬ್ಯಾಂಕ್‌ನಲ್ಲಿ ಅಳವಡಿಸಿ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡಿದ್ದಾರೆ. ಮೊಬೈಲ್ ಬ್ಯಾಂಕ್‌ನ್ನು ರಾಜ್ಯದ ಸಹಕಾರಿ ರಂಗದಲ್ಲಿ ಮೊದಲ ಬಾರಿಗೆ ಪರಿಚಯಿಸಿದ ಹೆಗ್ಗಳಿಕೆಯು  ಕೂಡ ರಾಜೇಂದ್ರ ಕುಮಾರ್ ಅವರಿಗಿದೆ.*  ರಾಜೇಂದ್ರ ಕುಮಾರ್ ಅವರಿಗೆ ಲಭಿಸಿದ ಪ್ರಶಸ್ತಿಗಳು : ಶ್ರೀಲಂಕಾದ ಕೊಲಂಬೊ ಮುಕ್ತ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ, ಕರ್ನಾಟಕ ಸರ್ಕಾರದಿಂದ ಸಹಕಾರ ರತ್ನ ಪ್ರಶಸ್ತಿ, ಸಹಕಾರ ವಿಶ್ವ ಬಂಧುಶ್ರೀ, ಮದರ್ ತೆರೆಸಾ ಸದ್ಭಾವನಾ ಪ್ರಶಸ್ತಿ, ಮಹಾತ್ಮಾ ಗಾಂಧಿ ಸಮ್ಮಾನ್ ಪ್ರಶಸ್ತಿ, ಬೆಸ್ಟ್ ಚೇರ್ ಮೆನ್ ನ್ಯಾಷನಲ್ ಅವಾರ್ಡ್, ನ್ಯಾಷನಲ್ ಎಕ್ಸ್ ಲೆನ್ಸ್ ಅವಾರ್ಡ್, ಔಟ್ ಸ್ಟೆಂಡಿಂಗ್ ಗ್ಲೋಬಲ್ ಲೀಡರ್ ಶಿಪ್ ಅವಾರ್ಡ್, ಬಹು ಪ್ರಭಾವಶಾಲಿ ಸಹಕಾರ ನಾಯಕ ಪ್ರಶಸ್ತಿ, ಅಂತಾರಾಷ್ಟ್ರೀಯ ಶ್ರೇಷ್ಠ ನಾಯಕತ್ವ ಅವಾರ್ಡ್, ಅಂತಾರಾಷ್ಟ್ರೀಯ ಸಾಧಕ ಪ್ರಶಸ್ತಿ , ಮದರ್ ತೆರೆಸಾ ಮೆಮೊರಿಯಲ್ ನ್ಯಾಶನಲ್ ಅವಾರ್ಡ್ ಹಾಗೂ ಏಶ್ಯಾನೆಟ್ ಸುವರ್ಣ ನ್ಯೂಸ್ ಚಾನೆಲ್ ನಿಂದ ಉಜ್ವಲ ಉದ್ಯಮಿ ಪ್ರಶಸ್ತಿ ಹೀಗೆ ಹಲವಾರು ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿಗಳು ಇವರಿಗೆ ಲಭಿಸಿವೆ. * ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ಅಧ್ಯಕ್ಷರಾದ ಬಳಿಕ ಎಸ್‌ಸಿಡಿಸಿಸಿ ಬ್ಯಾಂಕಿಗೆ 22 ಬಾರಿ ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಹಾಗೂ 19 ಬಾರಿ ನಬಾರ್ಡ್ ಪ್ರಶಸ್ತಿ , 3 ಬಾರಿ ಬ್ಯಾಂಕಿಂಗ್ ಪ್ರೋಂಟಿಯರ್ಸ್ ಪ್ರಶಸ್ತಿ ಹಾಗೂ 4 ಬಾರಿ ಎಪಿವೈ ರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ.