* ಸಂಸದೀಯ ಪಯಣ ಮುಗಿಸಿದ ಆರ್ಥಿಕ ಸುಧಾರಣೆಗಳ ಹರಿಕಾರ ಮನಮೋಹನ್‌ ಸಿಂಗ್‌ ಅವರು ಸುದೀರ್ಘ 33 ವರ್ಷಗಳ ಸಂಸದೀಯ ಜೀವನದಿಂದ ನಿವೃತ್ತಿ ಹೊಂದಿದ್ದಾರೆ. * 91 ವರ್ಷದ ಸಿಂಗ್‌ ಅವರ ರಾಜ್ಯಸಭಾ ಸದಸ್ಯತ್ವ ಏಪ್ರಿಲ್ 3 ರಂದು ಕೊನೆಗಂಡಿದೆ. 1990ರಲ್ಲಿ ಆರ್ಥಿಕ ಸುಧಾರಣೆಗಳು, ಉದಾರೀಕರಣ ನೀತಿಗಳನ್ನು ಜಾರಿಗೆ ತರುವ ಮೂಲಕ ಭಾರತದ ಅರ್ಥ ವ್ಯವಸ್ಥೆಗೆ ಹೊಸ ದಿಕ್ಕು ತೋರಿದ ಮನಮೋಹನ್ ಸಿಂಗ್‌ ಅವರದು.* ಸೆಪ್ಟೆಂಬರ್ 26, 1932 ರಂದು ಬ್ರಿಟಿಷ್ ಭಾರತದ ಗಾಹ್‌ನಲ್ಲಿ (ಈಗ ಪಾಕಿಸ್ತಾನದಲ್ಲಿದೆ) ಜನಿಸಿದ ಸಿಂಗ್ ಅವರು ಪಂಜಾಬ್ ವಿಶ್ವವಿದ್ಯಾಲಯದಿಂದ ಪದವಿ ಮತ್ತು ಸ್ನಾತಕೋತ್ತರ ಪದವಿಗಳನ್ನು ಪಡೆದರು, ನಂತರ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಡಿ ಫಿಲ್ ಪಡೆದರು.* ಸಿಂಗ್ ಅವರು 1971 ರಲ್ಲಿ ಆರ್ಥಿಕ ಸಲಹೆಗಾರರಾಗಿದ್ದರು, ಮುಖ್ಯ ಆರ್ಥಿಕ ಸಲಹೆಗಾರ, ಭಾರತೀಯ ರಿಸರ್ವ್ ಬ್ಯಾಂಕ್ (RBI) ಗವರ್ನರ್, ಹಣಕಾಸು ಕಾರ್ಯದರ್ಶಿ, ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದ (UGC) ಅಧ್ಯಕ್ಷರು, ಹಣಕಾಸು ಮಂತ್ರಿ ಸೇರಿದಂತೆ ವಿವಿಧ ಪ್ರಮುಖ ಸ್ಥಾನಗಳನ್ನು ಅಲಂಕರಿಸಿದ್ದಾರೆ