* ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರು ಮುಂದಿನ ಅಧ್ಯಕ್ಷೀಯ ಚುನಾವಣೆಗೆ ಡೆಮಾಕ್ರಟಿಕ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಆಗಸ್ಟ್ 06 ರಂದು (ಮಂಗಳವಾರ) ನಾಮನಿರ್ದೇಶನಗೊಂಡಿದ್ದಾರೆ.* ಕಮಲಾ ಹ್ಯಾರಿಸ್ ಅವರು ನವೆಂಬರ್ 5 ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಮತ್ತು ಮಾಜಿ ಅಧ್ಯಕ್ಷ  78 ವರ್ಷ ವಯಸ್ಸಿನ ಡೊನಾಲ್ಡ್ ಟ್ರಂಪ್ ಅವರನ್ನು ಎದುರಿಸಲಿದ್ದಾರೆ.* ಭಾರತೀಯ ಮೂಲದ ವ್ಯಕ್ತಿಯೊಬ್ಬರು ಇಲ್ಲಿನ ಅಧ್ಯಕ್ಷ ಸ್ಥಾನಕ್ಕೆ ಮೊಟ್ಟ ಮೊದಲ ಸಲ ನಾಮನಿರ್ದೇಶನಗೊಂಡಂತಾಗಿದೆ.* ಉಪಾಧ್ಯಕ್ಷ ಸ್ಥಾನಕ್ಕೆ ಮಿನ್ನೆಸೋಟಾ ಗವರ್ನರ್ ಟಿಮ್ ವಾಲ್ಟ್ ಅವರನ್ನು ಆಯ್ಕೆ ಮಾಡಿಕೊಂಡಿದ್ದೇನೆ' ಎಂದು ಕಮಲಾ ಹ್ಯಾರಿಸ್‌ ಅವರು ಘೋಷಿಸಿದ್ದಾರೆ.