* ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 20ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.* ಇತ್ತೀಚಿಗೆ ವಿಧಾನಸೌಧಕ್ಕೆ ಭೇಟಿ ನೀಡಿದ್ದ ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಅಧಿಕಾರಿಗಳ ಸಭೆ ನಡಿಸಿದ್ದು, ಅಧಿವೇಶನಕ್ಕೆ ಅಗತ್ಯವಾದ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದ್ದರು.* ಅಧಿವೇಶನ ಕರೆಯುವ ಕುರಿತು ರಾಜ್ಯಪಾಲ ತಾವರ್ ಚಂದ್ ಗೆಹಲೋಟ್ ಅವರಿಗೆ ಕಡತ ರವಾನಿಸಲಾಗಿದೆ.* 1924ರ ಡಿ.26 ಮತ್ತು 27ರಂದು ಬೆಳಗಾವಿಯಲ್ಲಿ ನಡೆದಿದ್ದ 39ನೇ ಕಾಂಗ್ರೆಸ್ ಅಧಿವೇಶನ ಉದ್ದೇಶಿಸಿ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದರು.* ಈ ಕಾರ್ಯಕ್ರಮ ನಡೆದು 100ವರ್ಷ ಪೂರೈಸಿರುವ ಕಾರಣ ಇದೇ ಡಿ.26 ಮತ್ತು 27ರಂದು ಬೆಳಗಾವಿಯಲ್ಲೇ ಕಾಂಗ್ರೆಸ್ ಅಧಿವೇಶನ ನಡೆಸಲು ಕೂಡ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.