* ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 20, 21, 22 ರಂದು ನಡೆಯಲಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.* ಜೂನ್ 25  (ಮಂಗಳವಾರ) ಗೃಹ ಕಚೇರಿ ಕೃಷ್ಣದಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಭೆ ನಡೆಸಿದರು. * 1974 ರಲ್ಲಿ ಜಯದೇವಿ ತಾಯಿ ಲಿಗಾಡೆ ಅವರ ಅಧ್ಯಕ್ಷತೆಯಲ್ಲಿ 48 ನೇ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ನಡೆಸಲಾಗಿತ್ತು. ಹಾಗೂ 63 ನೇ ಸಾಹಿತ್ಯ ಸಮ್ಮೇಳನ 1994 ರಲ್ಲಿ ಡಾ.ಚದುರಂಗ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಇದೀಗ 3 ನೇ ಭಾರಿ ಮಂಡ್ಯದಲ್ಲಿ 87 ನೇ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ.