* ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಯುವನಿಧಿ’ ನಿರುದ್ಯೋಗ ಭತ್ಯೆ ಯೋಜನೆಯ ನೋಂದಣಿಗೆ ಡಿಸೆಂಬರ್ 26ರಂದು ಚಾಲನೆ ನೀಡಲಿದ್ದೇವೆ ಎಂದು ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ತಿಳಿಸಿದರು.* ಡಿಸೆಂಬರ್ 26 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯುವನಿಧಿ ಗ್ಯಾರಂಟಿ ಕಾರ್ಯಕ್ರಮದ ಲೋಗೋ ಅನಾವರಣ ಮಾಡಲಿದ್ದಾರೆ. * ಯುವನಿಧಿ ನಿರುದ್ಯೋಗ ಭತ್ಯೆ ಯೋಜನೆ ಪದವಿ ಮುಗಿಸಿದವರಿಗೆ 3,000 ರೂ., ಡಿಪ್ಲೊಮಾ ಮಾಡಿದವರಿಗೆ 1,500 ರೂ. ನಿರುದ್ಯೋಗ ಭತ್ಯೆ ನೀಡಲಾಗುವುದು.* ಈ ಯೋಜನೆಯನ್ನು 4,81,000 ಪದವೀಧರರು, 48,153 ಡಿಪ್ಲೊಮಾ ತೇರ್ಗಡೆಯಾದವರು ಸೇರಿ 5,29,153 ಫಲಾನುಭವಿಗಳಿದ್ದಾರೆಂದು ಅಂದಾಜಿಸಲಾಗಿದ್ದು, 2023-24ರಲ್ಲಿ ನಿರುದ್ಯೋಗ ಭತ್ಯೆ ನೀಡಲು 250 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.* ಕರ್ನಾಟಕ ಓನ್, ಬಾಪೂಜಿ ಸೇವಾ ಕೇಂದ್ರ, ಗ್ರಾಮ ಓನ್ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದು ಎಂದು ಸಚಿವರು ತಿಳಿಸಿದ್ದಾರೆ.* ಈ ಯೋಜನೆಗೆ ಕೆಲವು ಮಾನದಂಡ ನಿಗದಿ- ಕರ್ನಾಟಕದಲ್ಲಿ ವಾಸಿಸುವ ಕನ್ನಡಿಗ ಅಭ್ಯರ್ಥಿಗಳಿಗೆ ಮಾತ್ರ- 2023ರ ವರ್ಷದಲ್ಲಿ ತೇರ್ಗಡೆಯಾಗಿದ್ದು, ಉತ್ತೀರ್ಣರಾಗಿ 180 ದಿನಗಳು ಕಳೆದರೂ ಉದ್ಯೋಗ ಸಿಗದವರು ಅರ್ಜಿ ಸಲ್ಲಿಸಬಹುದು- ಅರ್ಜಿ ಸಲ್ಲಿಸಿದ ದಿನದಿಂದ ಉದ್ಯೋಗ ಸಿಗುವವರೆಗೆ ಮಾತ್ರ ಅಥವಾ ಎರಡು ವರ್ಷ ಗರಿಷ್ಠ ಅವಧಿವರೆಗೆ ಮಾತ್ರ ಈ ಭತ್ಯೆ ಸಿಗಲಿದೆ.- ‘ಸೇವಾ ಸಿಂಧು’ ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಭತ್ಯೆಯನ್ನು ಡಿಬಿಟಿ ಮೂಲಕ ನೀಡಲಾಗುವುದು- ನಿರುದ್ಯೋಗ ಸ್ಥಿತಿ ಬಗ್ಗೆ ಸ್ವಯಂ ಘೋಷಿಸಬೇಕು. ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು- ಅಭ್ಯರ್ಥಿಗಳು ಅರ್ಜಿ ಹಾಕುವ ವೇಳೆ ತಾವು ಉತ್ತೀರ್ಣರಾದ ದಿನದಿಂದ 6 ತಿಂಗಳವರೆಗಿನ ತಮ್ಮ ಬ್ಯಾಂಕ್ ಖಾತೆಯ ವಹಿವಾಟು (ಸ್ಟೇಟ್‌ಮೆಂಟ್) ಪ್ರತಿ ನೀಡಬೇಕು.- ಪದವಿ, ಡಿಪ್ಲೊಮಾ ಬಳಿಕ ಉನ್ನತ ಶಿಕ್ಷಣ ಮುಂದುವರಿಸಿದರೆ ಈ ಭತ್ಯೆಗೆ ಅರ್ಹರಾಗಿರುವುದಿಲ್ಲ.