* ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನವಾದ ಡಿಸೆಂಬರ್ 29 ಅನ್ನು ಪ್ರತಿ ವರ್ಷ 'ವಿಶ್ವ ಮಾನವ ದಿನಾಚರಣೆ'ಯನ್ನಾಗಿ ಆಚರಿಸಲಾಗುತ್ತದೆ.* ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪುರವರು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆ ಎಂಬಲ್ಲಿ ಡಿಸೆಂಬರ್ 29, 1904ರಲ್ಲಿ ಜನಿಸಿದರು. ಕುವೆಂಪುರವರ ಜನ್ಮ ದಿನವನ್ನು ವಿಶ್ವ ಮಾನವ ದಿನವನ್ನಾಗಿ ಆಚರಿಸಲಾಗುತ್ತದೆ.* ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನವಾದ ಡಿಸೆಂಬರ್ 29 ಅನ್ನು ಪ್ರತಿ ವರ್ಷ 'ವಿಶ್ವ ಮಾನವ ದಿನಾಚರಣೆ'ಯನ್ನಾಗಿ ಆಚರಿಸಲು ಕರ್ನಾಟಕ ರಾಜ್ಯ ಸರಕಾರ ಡಿಸೆಂಬರ್ 2015 ರಲ್ಲಿ ನಿರ್ಧರಿಸಿದೆ. * ಎಲ್ಲ ಶಾಲಾ-ಕಾಲೇಜುಗಳಲ್ಲಿಯೂ ಅಂದು ಕುವೆಂಪು ಅವರ ವಿಶ್ವಮಾನವ ಸಂದೇಶ ಕುರಿತಂತೆ ವಿಚಾರ ಗೋಷ್ಠಿಗಳನ್ನು ಏರ್ಪಡಿಸುವ ಮೂಲಕ ‘ವಿಶ್ವ ಮಾನವ ದಿನಾಚರಣೆ’ಯನ್ನು ಅರ್ಥಪೂರ್ಣವನ್ನಾಗಿ ಆಚರಿಸಲು ನಿರ್ದೇಶನ ನೀಡಲಾಗಿದೆ.* ಕುವೆಂಪು ಅವರು ಮಾನವ ಕುಲಕ್ಕೆ ನೀಡಿದ ಮಾರ್ಗದರ್ಶನ/ ಆದರ್ಶಗಳು ಸಾರ್ವಕಾಲಿಕ. ಕನ್ನಡಕ್ಕೆ ಹೊಸ ನುಡಿಗಟ್ಟು ಹಾಗೂ ಹೊಸ ಕಲ್ಪನೆಗಳನ್ನು ನೀಡಿ ಹೊಸಗನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಧೀಮಂತ ಸಾಹಿತಿ. ‘ಮನುಜ ಮತ ವಿಶ್ವಪಥ’ ಸಂದೇಶ ಸಾರಿದ ಶ್ರೇಷ್ಠ ವಿಶ್ವಮಾನವ. ಅಂತಹ ಮಹಾನ್ ಚೇತನ ಕುವೆಂಪು ಅವರ ವಿಶ್ವಮಾನವ ಸಂದೇಶ ಕುರಿತು ವಿಚಾರ ಗೋಷ್ಠಿ ಏರ್ಪಡಿಸುವ ಮೂಲಕ ಅವರ ಜನ್ಮ ದಿನಾಚರಣೆಯನ್ನು ‘ವಿಶ್ವ ಮಾನವ ದಿನಾಚರಣೆ’ಯನ್ನಾಗಿ ಆಚರಿಸಲಾಗುತ್ತದೆ.* ಶ್ರೀರಾಮಾಯಣ ದರ್ಶನಂ ’ಕಾನೂರು ಹೆಗ್ಗಡತಿ’ ಹಾಗೂ ’ಮಲೆಗಳಲ್ಲಿ ಮದುಮಗಳು’ ಸೇರಿದಂತೆ ವಿವಿಧ ಕೃತಿ ಹಾಗೂ ಕಾದಂಬರಿಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ್ದಾರೆ. ಇವರು ಸಾಹಿತ್ಯ ಸೇವೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪದ್ಮಭೂಷಣ, ಕರ್ನಾಟಕ ರತ್ನ ಪ್ರಶಸ್ತಿ, ರಾಷ್ಟ್ರಕವಿ, ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಭಾರತೀಯ ಜ್ಞಾನಪೀಠ ಪ್ರಶಸ್ತಿ, ಪಂಪ ಪ್ರಶಸ್ತಿ ಹಾಗೂ ಪದ್ಮವಿಭೂಷಣ ಸೇರಿದಂತೆ ವಿವಿಧ ಪ್ರಶಸ್ತಿಗಳು ಲಭಿಸಿದೆ.