* ನಮ್ಮ ಬದುಕಿನ ಎಲ್ಲ ಸ್ತರಗಳಲ್ಲೂ ಪೂರಕವಾಗಿರುವ ಮಣ್ಣು ಆಹಾರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಫಲವತ್ತತೆಯನ್ನು ಕಾಪಾಡಿಕೊಳ್ಳಲು ಮಣ್ಣಿನ ಸವೆತವನ್ನು ಕಡಿಮೆ ಮಾಡಲು ಜನರಲ್ಲಿ ಜಾಗೃತಿಯನ್ನು ಮೂಡಿಸಲು ಪ್ರತಿ ವರ್ಷ ಡಿಸೆಂಬರ್ 5ರಂದು ವಿಶ್ವ ಮಣ್ಣಿನ ದಿನವನ್ನು ಆಚರಿಸಲಾಗುತ್ತದೆ. * 202ರ5 ವಿಶ್ವ ಮಣ್ಣಿನ ದಿನದ ಥೀಮ್ : "ಆರೋಗ್ಯಕರ ನಗರಗಳಿಗೆ ಆರೋಗ್ಯಕರ ಮಣ್ಣು" ಎಂಬುವುದು ಥೀಮ್ ಆಗಿದೆ.* 2002 ರಲ್ಲಿ ಅಂತರರಾಷ್ಟ್ರೀಯ ಮಣ್ಣು ವಿಜ್ಞಾನಗಳ ಒಕ್ಕೂಟವು ವಾರ್ಷಿಕವಾಗಿ ಡಿಸೆಂಬರ್ 5 ರಂದು ವಿಶ್ವ ಮಣ್ಣಿನ ದಿನವನ್ನು ಆಚರಿಸಲು ಶಿಫಾರಸು ಮಾಡಿತು. ಅಲ್ಲದೆ ಥಾಯ್ಲೆಂಡ್ ಸಾಮ್ರಾಜ್ಯದ ನಾಯಕತ್ವದಲ್ಲಿ ಮತ್ತು ಜಾಗತಿಕ ಮಣ್ಣಿನ ಪಾಲುದಾರಿಕೆಯ ಚೌಕಟ್ಟಿನೊಳಗೆ ಜಾಗತಿಕ ಜಾಗೃತಿ ಮೂಡಿಸುವ ವೇದಿಕೆಯಾಗಿ ವಿಶ್ವ ಮಣ್ಣಿನ ದಿನವನ್ನು ಔಪಚಾರಿಕವಾಗಿ ಸ್ಥಾಪಿಸುವುದನ್ನು FAO ಬೆಂಬಲಿಸಿತು. * FAO ಯ ಸಮ್ಮೇಳನವನ್ನು ಜೂನ್ 2013 ರಲ್ಲಿ ವಿಶ್ವ ಮಣ್ಣಿನ ದಿನವನ್ನು ಸರ್ವಾನುಮತದಿಂದ ಅನುಮೋದಿಸಲಾಯಿತು ಮತ್ತು ಡಿಸೆಂಬರ್ 2013 ರಲ್ಲಿ UN ಜನರಲ್ ಅಸೆಂಬ್ಲಿ 68 ನೇ ಅಧಿವೇಶನದಲ್ಲಿ ಡಿಸೆಂಬರ್ 5 ಅನ್ನು ವಿಶ್ವ ಮಣ್ಣಿನ ದಿನವೆಂದು ಘೋಷಿಸಿತು. ಮೊದಲ ವಿಶ್ವ ಮಣ್ಣಿನ ದಿನವನ್ನು ಡಿಸೆಂಬರ್ 5, 2014 ರಂದು ಆಚರಿಸಲಾಯಿತು.* ವಿಶ್ವ ಮಣ್ಣು ದಿನದ ಮಹತ್ವ- ಈ ದಿನವನ್ನು ಆಚರಿಸುವ ಉದ್ದೇಶವು ಮಣ್ಣಿನ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವುದಾಗಿದೆ.- ಇಂದು ರಾಸಯನಿಕ ಗೊಬ್ಬರಗಳ ಅತಿಯಾದ ಬಳಕೆ, ಪ್ಲಾಸ್ಟಿಕ್ ಬಳಕೆ ಸೇರಿದಂತೆ ಇತ್ಯಾದಿ ಮಾಲಿನ್ಯದ ಕಾರಣದಿಂದಾಗಿ ಮಣ್ಣಿನ ಫಲವತ್ತತೆಯು ಕ್ಷೀಣಿಸುತ್ತಿದೆ. ಅಷ್ಟು ಮಾತ್ರವಲ್ಲದೆ ಕಾಡುಗಳ ನಾಶದಿಂದಾಗಿ ಪ್ರವಾಹ, ಭಾರಿ ಮಳೆಯ ಸಂದರ್ಭದಲ್ಲಿ ಮಣ್ಣಿನ ಸವೆತವೂ ಹೆಚ್ಚಾಗುತ್ತಿದೆ. ಹೀಗಾಗಿ ಸುಸ್ಥಿರ ಭವಿಷ್ಯಕ್ಕಾಗಿ ಮಣ್ಣಿನ ಸಂರಕ್ಷಣೆ ಎಷ್ಟು ಮುಖ್ಯ ಎಂಬ ಬಗ್ಗೆ ಜಾಗೃತಿ ಮೂಡಿಸುವುದು ಈ ವಿಶೇಷ ಆಚರಣೆಯ ಮುಖ್ಯ ಉದ್ದೇಶವಾಗಿದೆ.