➤ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಡಿಸೆಂಬರ್ 2025 ರ ತಿಂಗಳ ಅತ್ಯುತ್ತಮ ಆಟಗಾರ ಪ್ರಶಸ್ತಿಗಳನ್ನು ಘೋಷಿಸಿದ್ದು, ದಕ್ಷಿಣ ಆಫ್ರಿಕಾದ ಲಾರಾ ವೊಲ್ವಾರ್ಡ್ ಮತ್ತು ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ ಈ ಗೌರವಕ್ಕೆ ಪಾತ್ರರಾಗಿದ್ದಾರೆ.➤ ಐಸಿಸಿ ಮಹಿಳಾ ತಿಂಗಳ ಆಟಗಾರ: ಲಾರಾ ವೊಲ್ವಾರ್ಡ್ (ದಕ್ಷಿಣ ಆಫ್ರಿಕಾ) : ಐರ್ಲೆಂಡ್ ವಿರುದ್ಧದ ಟಿ20 ಮತ್ತು ಏಕದಿನ ಸರಣಿಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದ ದಕ್ಷಿಣ ಆಫ್ರಿಕಾ ತಂಡದ ನಾಯಕಿ ಲಾರಾ ವೊಲ್ವಾರ್ಡ್ ಈ ಪ್ರಶಸ್ತಿ ಗೆದ್ದಿದ್ದಾರೆ. ಟಿ20 ಸರಣಿಯಲ್ಲಿ ಅಜೇಯ 115 ರನ್ ಸೇರಿದಂತೆ ಒಟ್ಟು 137 ರನ್ ಗಳಿಸಿದರು.ಏಕದಿನ ಸರಣಿಯಲ್ಲಿ ಸತತ ಎರಡು ಶತಕಗಳನ್ನು (124 ಮತ್ತು ಅಜೇಯ 100) ಬಾರಿಸುವ ಮೂಲಕ 127.50 ರ ಸರಾಸರಿಯಲ್ಲಿ 255 ರನ್ ಕಲೆಹಾಕಿದರು. ಇದು ಮೂರು ತಿಂಗಳ ಅವಧಿಯಲ್ಲಿ ಅವರು ಪಡೆಯುತ್ತಿರುವ ಎರಡನೇ ಪ್ರಶಸ್ತಿಯಾಗಿದೆ.➤ ಐಸಿಸಿ ಪುರುಷರ ತಿಂಗಳ ಆಟಗಾರ: ಮಿಚೆಲ್ ಸ್ಟಾರ್ಕ್ (ಆಸ್ಟ್ರೇಲಿಯಾ): ಇಂಗ್ಲೆಂಡ್ ವಿರುದ್ಧದ ಆಶಸ್ (Ashes) ಸರಣಿಯಲ್ಲಿ ಮಾರಕ ಬೌಲಿಂಗ್ ದಾಳಿ ಸಂಘಟಿಸಿದ ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ಈ ಗೌರವಕ್ಕೆ ಭಾಜನರಾಗಿದ್ದಾರೆ. ಡಿಸೆಂಬರ್ ತಿಂಗಳಿನಲ್ಲಿ ನಡೆದ ಟೆಸ್ಟ್ ಪಂದ್ಯಗಳಲ್ಲಿ ಸ್ಟಾರ್ಕ್ ಒಟ್ಟು 16 ವಿಕೆಟ್‌ಗಳನ್ನು ಕಬಳಿಸಿದರು. ಪರ್ತ್ ಟೆಸ್ಟ್‌ನಲ್ಲಿ 10 ವಿಕೆಟ್ ಹಾಗೂ ಬ್ರಿಸ್ಬೇನ್ ಟೆಸ್ಟ್‌ನಲ್ಲಿ 8 ವಿಕೆಟ್ ಪಡೆಯುವ ಮೂಲಕ ಆಸ್ಟ್ರೇಲಿಯಾ 4-1 ಅಂತರದಲ್ಲಿ ಸರಣಿ ಗೆಲ್ಲಲು ಪ್ರಮುಖ ಪಾತ್ರ ವಹಿಸಿದರು. ಸರಣಿಯುದ್ದಕ್ಕೂ 31 ವಿಕೆಟ್ ಪಡೆದ ಇವರು 'ಸರಣಿ ಶ್ರೇಷ್ಠ' ಪ್ರಶಸ್ತಿಗೂ ಭಾಜನರಾಗಿದ್ದಾರೆ.