* ಎರಡನೇ ಅವಧಿಗೆ ಅಮೇರಿಕಾದ 47ನೇ ಅಧ್ಯಕ್ಷರಾಗಿ ಜನವರಿ 20ರಂದು ಪ್ರಮಾಣ ವಚನ ಸ್ವೀಕರಿಸಲಿರುವ ಡೊನಾಲ್ಡ್ ಟ್ರಂಪ್ ಅವರ ಪದಗ್ರಹಣ ಸಮಾರಂಭಕ್ಕೆ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಭಾಗಿಯಾಗಲಿದ್ದಾರೆ.* ಜನವರಿ.20ರಂದು ವಾಷಿಂಗ್ಟನ್ ಡಿ.ಸಿಯಲ್ಲಿ ನಡೆಯುವ ಸಮಾರಂಭದಲ್ಲಿ ನಿರ್ಗಮಿತ ಅಧ್ಯಕ್ಷ ಜೋ ಬೈಡನ್ ಅವರು ಡೊನಾಲ್ಡ್ ಟ್ರಂಪ್ ಅವರಿಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ.* ಅಮೆರಿಕದ ಆಹ್ವಾನದ ಮೇರೆಗೆ ಜೈಶಂಕರ್ ಅವರು ಡೊನಾಲ್ಡ್ ಟ್ರಂಪ್ ಅವರ ಪ್ರಮಾಣವಚನ ಸಮಾರಂಬದಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಅದೇ ವೇಳೆ, ಅಮೆರಿಕ ಆಡಳಿತದ ಪ್ರತಿನಿಧಿಗಳು, ಇತರ ರಾಷ್ಟ್ರಗಳ ಗಣ್ಯರೊಂದಿಗೆ ಸಭೆ ನಡೆಸಲಿದ್ದಾರೆ.* ಚೀನಾದ ಅಧ್ಯಕ್ಷ ಷಿ ಜಿನ್ಪಿಂಗ್, ಆಪಲ್ ಕಂಪನಿಯ ಸಿಇಒ ಟಿಮ್ ಕುಕ್ ಸೇರಿದಂತೆ ವಿವಿಧ ದೇಶಗಳ ಮುಖ್ಯಸ್ಥರು ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.* ಡೊನಾಲ್ಡ್ ಟ್ರಂಪ್ 2017ರಂದು ಮೊದಲ ಬಾರಿಗೆ ಅಮೇರಿಕಾದ ಅಧ್ಯಕ್ಷರಾಗಿದ್ದರು. ಈಗ ಎರಡನೇ ಬಾರಿಗೆ ಅಧ್ಯಕ್ಷರಾಗಿ ಪ್ರಮಾಣ ವಚನವನ್ನ ಸ್ವೀಕರಿಸಲಿದ್ದಾರೆ, ಗಣ್ಯಾತಿಗಣ್ಯರು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.