* ಪ್ರಧಾನಿ ನರೇಂದ್ರ ಮೋದಿ ಇಂದು (ಜುಲೈ 25, 2025) ಪ್ರಧಾನಿಯಾಗಿ 4,078 ದಿನಗಳನ್ನು ಪೂರ್ಣಗೊಳಿಸಿದ್ದಾರೆ.* ಇದರೊಂದಿಗೆ ಅವರು ಇಂದಿರಾ ಗಾಂಧಿಯ 4,077 ದಿನಗಳ ಸೇವೆಯ ದಾಖಲೆಯನ್ನು ಮುರಿದು, ಭಾರತದ ಇತಿಹಾಸದಲ್ಲಿಯೇ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಎರಡನೇ ಪ್ರಧಾನಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.* ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ 16 ವರ್ಷ 286 ದಿನಗಳ ಕಾಲ ಪ್ರಧಾನಿಯಾಗಿದ್ದು, ಇವರ ದಾಖಲೆ ಇನ್ನೂ ಅಪ್ರಾಪ್ಯವಾಗಿದೆ. ಆದರೆ ಮೋದಿ, ಸತತ ಮೂರನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾಗುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.* ಸ್ವಾತಂತ್ರ್ಯ ನಂತರ ಜನಿಸಿದ ಮೊದಲ ಪ್ರಧಾನಿ ನರೇಂದ್ರ ಮೋದಿ, ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಕಾಂಗ್ರೆಸ್ಸೇತರ ಪ್ರಧಾನಿ ಮಾತ್ರವಲ್ಲದೆ, ಎರಡು ಅವಧಿಗಳನ್ನು ಪೂರ್ಣಗೊಳಿಸಿದ ಏಕೈಕ ಕಾಂಗ್ರೆಸ್ಸೇತರ ನಾಯಕವೂ ಹೌದು.* ಮೋದಿ ಅವರು 2001ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿ ರಾಜಕೀಯದ ಶಿಖರಕ್ಕೇರಿದರು. 2002, 2007, 2012ರ ವಿಧಾನಸಭಾ ಚುನಾವಣೆಗಳ ಜೊತೆಗೆ 2014, 2019 ಹಾಗೂ 2024ರ ಲೋಕಸಭಾ ಚುನಾವಣೆಗಳಲ್ಲಿ ಗೆಲುವು ಸಾಧಿಸಿ ಸತತ ಆರು ಚುನಾವಣೆಗಳಲ್ಲಿ ಗೆಲುವು ದಾಖಲಿಸಿದ ಏಕೈಕ ನಾಯಕ ಎನಿಸಿಕೊಂಡಿದ್ದಾರೆ.