* ಸೆಮಿಕಾನ್ ಇಂಡಿಯಾ 2025 ಸಮ್ಮೇಳನದಲ್ಲಿ, ಭಾರತವು ತನ್ನ ಸೆಮಿಕಂಡಕ್ಟರ್ ತಂತ್ರಜ್ಞಾನ ಕ್ಷೇತ್ರದಲ್ಲಿ ಐತಿಹಾಸಿಕ ಹೆಜ್ಜೆ ಇಟ್ಟಿದೆ. ದೇಶೀಯವಾಗಿ ಅಭಿವೃದ್ಧಿಪಡಿಸಿದ ಮೊದಲ 32-ಬಿಟ್ "ವಿಕ್ರಮ್" ಮೈಕ್ರೋಪ್ರೊಸೆಸರ್ ಅನ್ನು ಅನಾವರಣಗೊಳಿಸಲಾಯಿತು. ಈ ಸಂದರ್ಭದಲ್ಲಿ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವೆ ಅಶ್ವಿನಿ ವೈಷ್ಣವ್ ಅವರು ನಾಲ್ಕು ಅನುಮೋದಿತ ಯೋಜನೆಗಳ ಪರೀಕ್ಷಾ ಚಿಪ್ಗಳ ಜೊತೆಗೆ ಈ ಪ್ರೊಸೆಸರ್ನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಸಲ್ಲಿಸಿದರು. ಈ ಅನಾವರಣವು ಭಾರತದ ಸೆಮಿಕಂಡಕ್ಟರ್ ಸ್ವಾವಲಂಬನೆ ಪ್ರಯತ್ನಕ್ಕೆ ಮಹತ್ವದ ಮೈಲಿಗಲ್ಲಾಗಿ ಪರಿಣಮಿಸಿದೆ.* ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಸೆಮಿಕಂಡಕ್ಟರ್ ಲ್ಯಾಬೋರೇಟರಿ ಅಭಿವೃದ್ಧಿಪಡಿಸಿದ ವಿಕ್ರಮ್-32 ಬಿಟ್ ಪ್ರೊಸೆಸರ್ ಚಿಪ್ ಅನ್ನು ಅನಾವರಣಗೊಳಿಸಲಾಯಿತು.* ದೆಹಲಿಯಲ್ಲಿ ನಡೆಯುತ್ತಿರುವ ಸೆಮಿಕಾನ್ ಇಂಡಿಯಾ 2025 ರಲ್ಲಿ ಕಾರ್ಯಕ್ರಮದಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಚಿಪ್ ಹಸ್ತಾಂತರಿಸಿದರು.* ಇದು ಭಾರತದ ಮೊದಲ ಸಂಪೂರ್ಣ ಸ್ವದೇಶಿ 32-ಬಿಟ್ ಮೈಕ್ರೊಪ್ರೊಸೆಸರ್ ಆಗಿದ್ದು, ಬಾಹ್ಯಾಕಾಶ ಉಡಾವಣಾ ವಾಹನಗಳ ಕಠಿಣ ಪರಿಸ್ಥಿತಿಗಳಿಗೆ ವಿನ್ಯಾಸಗೊಳಿಸಲಾಗಿದೆ.* ವಿಕ್ರಮ್ ಚಿಪ್ನ್ನು ಮೊದಲು ಮಾರ್ಚ್ನಲ್ಲಿ ಪರಿಚಯಿಸಲಾಗಿತ್ತು ಮತ್ತು PSLV-C60 ಉಡಾವಣೆಯಲ್ಲಿ ಯಶಸ್ವಿಯಾಗಿ ಪರೀಕ್ಷಿಸಲಾಯಿತು. * ಇದು ಉಪಗ್ರಹ ಹಾಗೂ ಬಾಹ್ಯಾಕಾಶ ವಾಹನಗಳ ಸಂಕೀರ್ಣ ಕಾರ್ಯಗಳನ್ನು ನಿರ್ವಹಿಸಬಲ್ಲದು, ತೀವ್ರ ತಾಪಮಾನವನ್ನು ತಡೆದುಕೊಳ್ಳಬಲ್ಲದು ಮತ್ತು ಹೆಚ್ಚಿನ ಸ್ಮರಣಾ ಸಾಮರ್ಥ್ಯವನ್ನು ಹೊಂದಿದೆ.* ಕಾರ್ಯಕ್ರಮದಲ್ಲಿ ಸಚಿವ ಅಶ್ವಿನಿ ವೈಷ್ಣವ್, ಭಾರತದಲ್ಲಿ ಐದು ಹೊಸ ಸೆಮಿಕಂಡಕ್ಟರ್ ಘಟಕಗಳು ನಿರ್ಮಾಣ ಹಂತದಲ್ಲಿದ್ದು, ಒಟ್ಟಾಗಿ 1.60 ಲಕ್ಷ ಕೋಟಿ ರೂ. ಹೂಡಿಕೆಯೊಂದಿಗೆ ಹತ್ತು ಪ್ರಮುಖ ಯೋಜನೆಗಳನ್ನು ಅನುಮೋದಿಸಲಾಗಿದೆ ಎಂದು ತಿಳಿಸಿದರು. 23 ಕ್ಕೂ ಹೆಚ್ಚು ಸ್ಟಾರ್ಟ್ಅಪ್ಗಳಿಗೆ ಬೆಂಬಲ ನೀಡಲಾಗುತ್ತಿದೆ.* ಪ್ರಧಾನಿ ಮೋದಿ ಮಾತನಾಡಿ, ಚಿಪ್ಗಳನ್ನು "ಡಿಜಿಟಲ್ ವಜ್ರಗಳು" ಎಂದು ಹೋಲಿಸಿ, ಭಾರತವು ವಿಶ್ವದ ವಿಶ್ವಾಸಾರ್ಹ ಪಾಲುದಾರ ಎಂದು ಹೇಳಿದರು.* ಭಾರತದ ಜಿಡಿಪಿ ಬೆಳವಣಿಗೆ 7.8% ತಲುಪಿರುವುದನ್ನು ಉಲ್ಲೇಖಿಸಿ, ಹತ್ತು ಸೆಮಿಕಂಡಕ್ಟರ್ ಯೋಜನೆಗಳ ಮೂಲಕ 1.5 ಲಕ್ಷ ಕೋಟಿ ರೂ. ಹೂಡಿಕೆ ಭಾರತದಲ್ಲಿ ನಡೆಯುತ್ತಿದೆ ಎಂದು ವಿವರಿಸಿದರು.