* ಕರ್ನಾಟಕ ರಾಜ್ಯದಲ್ಲಿ ಸೆಪ್ಟೆಂಬರ್ 15ರಿಂದ ದೇಶದಲ್ಲೇ ಮೊದಲ ಬಾರಿಗೆ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಪ್ರಾರಂಭವಾಗಲಿದೆ. ಇದೇ ವೇಳೆ 15 ಜಿಲ್ಲೆಗಳಲ್ಲಿ ಮಾಜಿ ದೇವದಾಸಿಯರ ಮರುಸಮೀಕ್ಷೆಯೂ ನಡೆಯಲಿದೆ.* ಈ ಸಮೀಕ್ಷೆಗಳನ್ನು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ನಡೆಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದರ ಚಾಲನೆ ನೀಡಿದರು. * ಸಮೀಕ್ಷೆಯ ಉದ್ದೇಶ, ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಗತಿ ಕುರಿತು ನಿಖರ ಮಾಹಿತಿಯನ್ನು ಸಂಗ್ರಹಿಸಿ ಪುನರ್ವಸತಿ ಕಲ್ಪಿಸುವುದಾಗಿದೆ.* ಸಮೀಕ್ಷೆ ಕಾರ್ಯ 45 ದಿನಗಳಲ್ಲಿ ಪೂರ್ಣಗೊಳ್ಳುವಂತೆ ಯೋಜನೆ ರೂಪಿಸಲಾಗಿದೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಧಾರವಾಡ, ಹಾವೇರಿ, ಗದಗ, ಕಲಬುರ್ಗಿ, ಯಾದಗಿರಿ, ಬಳ್ಳಾರಿ ಸೇರಿದಂತೆ 15 ಜಿಲ್ಲೆಗಳಲ್ಲಿ ಈ ಕಾರ್ಯ ನಡೆಯಲಿದೆ.* ತೃತೀಯ ಲಿಂಗಿಗಳ ಸಮೀಕ್ಷೆಗಳನ್ನು ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ನಡೆಸಲಾಗುತ್ತದೆ. ಮಾಜಿ ದೇವದಾಸಿಯರ ಮರುಸಮೀಕ್ಷೆಗಳನ್ನು ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾ ಕಚೇರಿಗಳಲ್ಲಿ ನಡೆಸಲಾಗುತ್ತದೆ.* ಇದರಿಗಾಗಿ KARMANI Web App (ಟ್ರಾನ್ಸ್ಜೆಂಡರ್ಗಳಿಗೆ) ಹಾಗೂ ಸೇವಾ ಸಿಂಧು Web App (ಮಾಜಿ ದೇವದಾಸಿಯರಿಗಾಗಿ) ಸಿದ್ಧಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 1800 599 2025ನ್ನು ಸಂಪರ್ಕಿಸಬಹುದು.