* ಬಳ್ಳಾರಿ ಜಿಲ್ಲೆಯ ಸಂಡೂರಿನ ದೇವದಾರಿ ಕಬ್ಬಿಣದ ಅದಿರು ಗಣಿ ಕಾರ್ಯಾಚರಣೆಗೆ ಸಂಬಂಧಿಸಿದ ಕುದುರೆಮುಖ ಕಬ್ಬಿಣದ ಅದಿರು ಕಂಪನಿಯ (ಕೆಐಒಸಿಎಲ್) ಕಡತಕ್ಕೆ ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಸಹಿ ಹಾಕಿದರು.* 'ಪಶ್ಚಿಮ ಘಟ್ಟದ ಜೀವವೈವಿಧ್ಯಕ್ಕೆ ಹಾನಿಯಾದ ಕಾರಣಕ್ಕೆ ಕುದುರೆಮುಖದಲ್ಲಿ ಗಣಿಗಾರಿಕೆ ನಡೆಸದಂತೆ ಸುಪ್ರೀಂ ಕೋರ್ಟ್ ತಾಕೀತು ಮಾಡಿತ್ತು. ಸಂಡೂರು ಅತ್ಯಂತ ಶ್ರೀಮಂತ ಜೀವವೈವಿಧ್ಯದ ಪ್ರದೇಶ. ಇಲ್ಲಿ ಗಣಿಗಾರಿಕೆ ನಡೆಸಿದರೆ ಭಾರಿ ಹಾನಿಯಾಗಲಿದೆ. ಉಕ್ಕು ಸಚಿವಾಲಯದ ಅಧಿಕಾರಿಗಳ ಮಾತು ಕೇಳಿ ಕುಮಾರಸ್ವಾಮಿಯವರು ಕಡತಕ್ಕೆ ಸಹಿ ಹಾಕಿದ್ದಾರೆ. * ಈ ನಿರ್ಧಾರವನ್ನು ಮರುಪರಿಶೀಲಿಸಬೇಕು. ಸಂಡೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಥಳೀಯರು ಹಾಗೂ ಪರಿಸರ ಹೋರಾಟಗಾರರೊಂದಿಗೆ ಸಮಾಲೋಚನೆ ನಡೆಸಬೇಕು' ಎಂದು ಸಮಾಜ ಪರಿವರ್ತನ ಸಮುದಾಯದ ಅಧ್ಯಕ್ಷ ಎಸ್.ಆರ್.ಹಿರೇಮಠ ಆಗ್ರಹಿಸಿದರು.* 2024–2025ನೇ ಸಾಲಿನಲ್ಲಿ ದೇವದಾರಿಯಲ್ಲಿ 3 ಲಕ್ಷ ಟನ್‌ಗಳಷ್ಟು ಗಣಿಗಾರಿಕೆ ನಡೆಸುವ ಯೋಜನೆಯನ್ನು ಕೆಐಒಸಿಎಲ್‌ ಹೊಂದಿದೆ. ಉಕ್ಕು ಸಚಿವಾಲಯದ ಕಾರ್ಯದರ್ಶಿ ನಾಗೇಂದ್ರನಾಥ ಸಿನ್ಹಾ ಸೇರಿ ಉನ್ನತ ಅಧಿಕಾರಿಗಳ ಜತೆ ಸಭೆ ನಡೆಸಿದ ಸಚಿವರು, 'ಉತ್ಪಾದನೆಯಲ್ಲಿ ಕ್ಷಮತೆ ತರಬೇಕು. ನಿಗದಿತ ಗುರಿ ಮುಟ್ಟಬೇಕು' ಎಂದು ಸೂಚಿಸಿದರು.