* ಭಾರತೀಯ ಜನತಾ ಪಕ್ಷ (ಬಿಜೆಪಿ) ಬುಧವಾರ (ಫೆಬ್ರವರಿ 19) ಶಾಲಿಮಾರ್ ಬಾಗ್ ಶಾಸಕಿಯಾಗಿ ಆಯ್ಕೆಯಾದ ರೇಖಾ ಗುಪ್ತಾ ಅವರನ್ನು ದೆಹಲಿಯ ಹೊಸ ಮುಖ್ಯಮಂತ್ರಿಯಾಗಿ ಘೋಷಿಸಿತು. ದೆಹಲಿಯ ನೂತನ ಮುಖ್ಯಮಂತ್ರಿ ಫೆಬ್ರವರಿ 20 ರಂದು (ಗುರುವಾರ) ಪ್ರಮಾಣ ವಚನ ಸ್ವೀಕರಿಸಿಲಿದ್ದಾರೆ. ಉನ್ನತ ಮಟ್ಟದ ಗಣ್ಯರು, ಸೆಲೆಬ್ರಿಟಿಗಳು ಮತ್ತು ಪಕ್ಷದ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ.* ದೆಹಲಿ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಅವರ ಹೆಸರನ್ನ ಬಿಜೆಪಿ ಹೈಕಮಾಂಡ್ ಘೋಷಿಸಿದೆ. ಇವರು ದೆಹಲಿಯ 9ನೇ ಸಿಎಂ ಮತ್ತು 4ನೇ ಮಹಿಳಾ ಮುಖ್ಯಮಂತ್ರಿ. ಹಾಗೇ ಪರ್ವೇಶ್ ವರ್ಮಾ ಅವರು ದೆಹಲಿ ಉಪಮುಖ್ಯಮಂತ್ರಿ ಆಗಲಿದ್ದಾರೆ.* ಇದಕ್ಕೂ ಮೊದಲು ಬಿಜೆಪಿಯ ಸುಷ್ಮಾ ಸ್ವರಾಜ್, ಕಾಂಗ್ರೆಸ್ನ ಶೀಲಾ ದೀಕ್ಷಿತ್, ಆಮ್ ಆದ್ಮಿ ಪಕ್ಷದ ಅತಿಶಿ ಅವರು ದೆಹಲಿಯ ಮಹಿಳಾ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದರು. 4ನೇ ಮಹಿಳಾ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಅವರು ಆಯ್ಕೆಯಾಗಿದ್ದಾರೆ.* ದೆಹಲಿ ಚುನಾವಣೆಯಲ್ಲಿ ನವದೆಹಲಿ ಸ್ಥಾನದಿಂದ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿದ ಬಿಜೆಪಿ ಸಂಸದ ಪರ್ವೇಶ್ ವರ್ಮಾ ಅವರನ್ನು ಉಪಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಹೆಚ್ಚುವರಿಯಾಗಿ, ಕೇಸರಿ ಪಕ್ಷವು ವಿಜೇಂದರ್ ಗುಪ್ತಾ ಅವರನ್ನು ವಿಧಾನಸಭಾ ಸ್ಪೀಕರ್ ಆಗಿ ನೇಮಿಸಿದೆ.* ಪ್ರಸ್ತುತ ಭಾರತೀಯ ಜನತಾ ಪಕ್ಷ ಆಳುತ್ತಿರುವ ರಾಜ್ಯಗಳಲ್ಲಿ ಏಕೈಕ ಮಹಿಳಾ ಮುಖ್ಯಮಂತ್ರಿಯಾಗಿರುವ ರೇಖಾ ಗುಪ್ತಾ, ದೆಹಲಿ ಚುನಾವಣೆಯಲ್ಲಿ ಶಾಲಿಮಾರ್ ಬಾಗ್ ವಿಧಾನಸಭಾ ಕ್ಷೇತ್ರದಿಂದ 29,595 ಮತಗಳ ಅಂತರದಿಂದ ಗೆದ್ದಿದ್ದರು.