* ಭಾನುವಾರ(ಫೆ.23) ನವದೆಹಲಿಯಲ್ಲಿ ನಡೆದ ಎಎಪಿ ಶಾಸಕರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಅತಿಶಿ ಅವರನ್ನು ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.* ಆಮ್ ಆದ್ಮಿ ಪಕ್ಷದ ಸಭೆಯಲ್ಲಿ ಅರವಿಂದ ಕೇಜ್ರಿವಾಲ್ಸ್ ಸೇರಿದಂತೆ 22 ಶಾಸಕರು ಭಾಗವಹಿಸಿದ್ದು, ಅತಿಶಿ ಅವರನ್ನು ವಿರೋಧ ಪಕ್ಷದ ನಾಯಕಿಯನ್ನಾಗಿ ಆಯ್ಕೆ ಮಾಡಲಾಗಿದೆ.* ಅತಿಶಿ ಅವರು, 'ನನ್ನಲ್ಲಿ ನಂಬಿಕೆಯನ್ನು ಇಟ್ಟಿದ್ದಕ್ಕಾಗಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಮತ್ತು ಶಾಸಕಾಂಗ ಪಕ್ಷಕ್ಕೆ ಧನ್ಯವಾದಗಳು. ಪ್ರಬಲ ಪ್ರತಿಪಕ್ಷವು ಜನರ ಧ್ವನಿಯನ್ನು ಎತ್ತಿ ಹಿಡಿಯುತ್ತದೆ. ಆಮ್ ಆದ್ಮಿ ಪಕ್ಷವು ಬಿಜೆಪಿ ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸುತ್ತದೆ' ಎಂದು ಪಕ್ಷಕ್ಕೆ ಕೃತಜ್ಞತೆ ವ್ಯಕ್ತಪಡಿಸಿದರು.* ದೆಹಲಿ ವಿಧಾನಸಭೆಯ ಮೊದಲ ಅಧಿವೇಶನ ಫೆಬ್ರುವರಿ 24 ರಿಂದ ಮೂರು ದಿನ ನಡೆಯಲಿದೆ. ಬಿಜೆಪಿ ಸರ್ಕಾರವು ಹಿಂದಿನ ಎಎಪಿ ಸರ್ಕಾರದ ವಿರುದ್ಧ ಸಿಎಜಿ ವರದಿಗಳನ್ನು ಮಂಡಿಸಲು ಯೋಜಿಸಿದೆ.* ಫೆಬ್ರುವರಿ 5 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 48 ಸ್ಥಾನಗಳನ್ನು ಗೆದ್ದು ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೇರಿದೆ.* ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಸೇರಿದಂತೆ ಪಕ್ಷದ ಹಲವಾರು ಪ್ರಮುಖ ನಾಯಕರು ಕೂಡ ಚುನಾವಣೆಯಲ್ಲಿ ಸೋತಿದ್ದಾರೆ.