Job Description: * ಏ.9 ರಂದು ಪ್ರಧಾನಿ ಮೋದಿಯವರು ಮಧುಮಲೆಗೆ ಭೇಟಿ ನೀಡಿ ಆಸ್ಕರ್ ಪ್ರಶಸ್ತಿ ವಿಜೇತ 'ದಿ ಎಲಿಫೆಂಟ್ ವಿಸ್ಪರರ್ಸ್' ಸಾಕ್ಷ್ಯಚಿತ್ರದಲ್ಲಿ ನಟಿಸಿರುವ ಬೊಮ್ಮ ತಂಡದೊಂದಿಗೆ ಸಂವಾದ ನಡೆಸಲಿದ್ದಾರೆ.* ಭಾರತದ ಪ್ರಧಾನಿ ಮೋದಿ 50 ನೇ ವರ್ಷದ ಸಂಭ್ರಮಾಚರಣೆಯಲ್ಲಿರುವ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ, ಅರಣ್ಯ ಇಲಾಖೆಯ ಸಿಬ್ಬಂದಿಯೊಂದಿಗೆ ಸಂವಾದ ನಡೆಸಲಿದ್ದಾರೆ.* ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಹುಲಿ ಗಣತಿ ವರದಿಯನ್ನು ಬಿಡುಗಡೆ ಮಾಡಲಿದ್ದಾರೆ.