* ದಕ್ಷಿಣ ಭಾರತದ ಮೊದಲ ಮತ್ತು ದೇಶದ ಅತಿದೊಡ್ಡ ಚಿರತೆ ಸಫಾರಿಯನ್ನು ಪರಿಸರ ಸಚಿವ ಈಶ್ವರ್ ಖಂಡ್ರೆ ಅವರು ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ (ಬಿಬಿಪಿ)  ಜೂನ್ 26 ರಂದು ಉದ್ಘಾಟಿಸಿದ್ದಾರೆ.* ಸಫಾರಿಗಳಿಗಾಗಿ ಕೇಂದ್ರ ಮೃಗಾಲಯ ಪ್ರಾಧಿಕಾರದ ಮಾರ್ಗಸೂಚಿಗಳ ಪ್ರಕಾರ ಸಫಾರಿಗಾಗಿ 20 ಹೆಕ್ಟೇರ್ ಪ್ರದೇಶವನ್ನು ಗುರುತಿಸಿ ಬೇಲಿ ಹಾಕಲಾಗಿದೆ. ಇಡೀ ಪ್ರದೇಶಕ್ಕೆ 4.5 ಮೀಟರ್‌ ಎತ್ತರದ ಚೈನ್‌ ಲಿಂಕ್‌ ಜಾಲರಿ ಅಳವಡಿಸಲಾಗಿದೆ.  ಸದ್ಯ 8 ಚಿರತೆಗಳನ್ನು ತೆರೆದ ಅರಣ್ಯ ಪ್ರದೇಶದಲ್ಲಿ ಸಫಾರಿಗೆ ಬಿಡಲಾಗಿದೆ.* ಎಂಎಸ್ ಶೀಟ್ ಗಳನ್ನು 1.5 ಮೀಟರ್ ಎತ್ತರವಿರುವ 30ಡಿಗ್ರಿ ಇಳಿಜಾರಿನ ಕೋನದಲ್ಲಿ ಹಾಕುವ ಮೂಲಕ ಚಿರತೆಗಳು ಹೊರಗೆ ಬಾರದಂತೆ ಎಚ್ಚರ ವಹಿಸಲಾಗಿದೆ. ಒಟ್ಟು 4.5 ಕೋಟಿ ರೂ. ವೆಚ್ಚದಲ್ಲಿ ಸುರಕ್ಷಿತ ವಿನ್ಯಾಸ ರೂಪಿಸಲಾಗಿದೆ. ಪ್ರಸ್ತುತ ಉದ್ಯಾನದಲ್ಲಿ 14 ಚಿರತೆಗಳಿವೆ.* ದಕ್ಷಿಣ ಭಾರತದ ಪ್ರಥಮ ಮತ್ತು ದೇಶದಲ್ಲಿಯೇ ಅತಿ ದೊಡ್ಡ ಚಿರತೆ ಸಫಾರಿ ಆಗಿದ್ದು, ಪ್ರಸ್ತುತ 8 ಚಿರತೆಗಳನ್ನು ತೆರೆದ ವನ ಪ್ರದೇಶದಲ್ಲಿ ಸಫಾರಿಗೆ ಬಿಡಲಾಗಿದೆ.