* ಯುಎಇಯಲ್ಲಿ ಅತ್ಯುತ್ತಮ ಶಿಕ್ಷಣವನ್ನು ಒದಗಿಸುವ ಬದ್ಧತೆಯನ್ನು ಒತ್ತಿ ಹೇಳಿದ ಪ್ರಧಾನಿ ನರೇಂದ್ರ ಮೋದಿ ಅವರು ದುಬೈನಲ್ಲಿ ಶೀಘ್ರದಲ್ಲೇ ಹೊಸ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) ಕಚೇರಿಯನ್ನು ಸ್ಥಾಪಿಸಲಾಗುವುದು ಎಂದು ಘೋಷಿಸಿದರು.* ಅಬುಧಾಬಿಯಲ್ಲಿ ನಡೆದ ಅಹ್ಲಾನ್ ಮೋದಿ' ವಲಸಿಗ ಕಾರ್ಯಕ್ರಮದಲ್ಲಿ ಸಭಿಕರನ್ನುದ್ದೇಶಿಸಿ ಪ್ರಧಾನಿ ಮೋದಿ, ಶಿಕ್ಷಣ ಕ್ಷೇತ್ರದ ಮಹತ್ವದ ಸಾಧನೆಗಳನ್ನು ಎತ್ತಿ ತೋರಿಸಿದರು, "1.5 ಲಕ್ಷಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಯುಎಇ ಶಾಲೆಗಳಲ್ಲಿ ಅಧ್ಯಯನ ಮಾಡುತ್ತಿದ್ದಾರೆ.* ಕಳೆದ ತಿಂಗಳು ಐಐಟಿ ದೆಹಲಿ ಕ್ಯಾಂಪಸ್ ನಲ್ಲಿ ಸ್ನಾತಕೋತ್ತರ ಕೋರ್ಸ್ ಅನ್ನು ಪ್ರಾರಂಭಿಸಲಾಯಿತು ಮತ್ತು ದುಬೈನಲ್ಲಿ ಹೊಸ CBSE ಕಚೇರಿಯನ್ನು ಶೀಘ್ರದಲ್ಲೇ ತೆರೆಯಲಾಗುವುದು. ಇಲ್ಲಿನ ಭಾರತೀಯ ಸಮುದಾಯಕ್ಕೆ ಉತ್ತಮ ಶಿಕ್ಷಣವನ್ನು ಒದಗಿಸಲು ಈ ಸಂಸ್ಥೆಗಳು ಸಹಾಯಕವಾಗುತ್ತವೆ ಎಂದು ತಿಳಿಸಿದ್ದಾರೆ.* ಸಮುದಾಯ ಮತ್ತು ಸಂಸ್ಕೃತಿಯ ವಿಷಯದಲ್ಲಿ ಭಾರತ ಮತ್ತು ಯುಎಇಯ ಸಾಧನೆಗಳು ಜಗತ್ತಿಗೆ ಅನುಕರಿಸಲು ಮಾದರಿಯಾಗಿದೆ. ಭಾರತ ಮತ್ತು ಯುಎಇ ಭಾಷೆಗಳಲ್ಲಿಯೂ ನಿಕಟ ಸಾಮಿಪ್ಯವಿದೆ" ಎಂದು ಪ್ರಧಾನಿ ಮೋದಿ ಅವರು ತಿಳಿಸಿದ್ದಾರೆ.