* ಕೇಂದ್ರ ಸಂಪುಟದಲ್ಲಿ ಉಕ್ಕು, ಭಾರೀ ಕೈಗಾರಿಕೆಯ ಸಚಿವರಾಗಿ ಸದ್ದು ಮಾಡುತ್ತಿರುವ ಎಚ್.ಡಿ.ಕುಮಾರಸ್ವಾಮಿಯವರಿಗೆ ಮತ್ತೊಂದು ಜವಾಬ್ದಾರಿಯನ್ನು ನರೇಂದ್ರ ಮೋದಿ ಸರ್ಕಾರ ನೀಡಿದೆ. ಹಣಕಾಸು ವಿಚಾರದಲ್ಲಿ ನಿರ್ಣಾಯಕ ಪಾತ್ರ ವಹಿಸುವ  ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಗೆ ಅವರನ್ನು ಸದಸ್ಯರನ್ನಾಗಿ ಮಾಡಲಾಗಿದೆ.* ಎರಡು ಸ್ಥಾನ ಗೆದ್ದಿದ್ದರೂ ಮೋದಿ ಮತ್ತು ಅಮಿತ್ ಶಾ ಅವರ ವಿಶ್ವಾಸಗಳಿಸುವಲ್ಲಿ ಯಶಸ್ವಿಯಾಗಿರುವ ಕುಮಾರಸ್ವಾಮಿ ಅವರನ್ನು ಸಂಪುಟ ಆರ್ಥಿಕ ವ್ಯವಹಾರಗಳ ಸಮಿತಿಯಲ್ಲಿ ( Cabinet Committee on Economic Affairs ) ಸದಸ್ಯರನ್ನಾಗಿ ಸೇರ್ಪಡೆ ಮಾಡಲಾಗಿದೆ.* ಇದರಲ್ಲಿ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಭೂಸಾರಿಗೆ ಸಚಿವ ನಿತಿನ್ ಗಡ್ಕರಿ, ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ವಿದೇಶಾಂಗ ಸಚಿವ ಡಾ. ಜೈಶಂಕರ್, ವಾಣಿಜ್ಯ ಸಚಿವ ಪಿಯೂಶ್ ಗೋಯಲ್, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಪಂಚಾಯತ್ ರಾಜ್ ಸಚಿವ ಲಲ್ಲನ್ ಸಿಂಗ್ ಅವರು ಈ ಸಮಿತಿಯಲ್ಲಿರುವ ಇತರ ಸದಸ್ಯರಾಗಿದ್ದಾರೆ.* ದೇಶದ ಆರ್ಥಿಕ ವಿಚಾರದಲ್ಲಿ ಅತ್ಯಂತ ಮಹತ್ವದ ನಿರ್ಣಯ ತೆಗೆದುಕೊಳ್ಳುವ ಈ ಸಮಿತಿಯ ಹನ್ನೊಂದು ಸದಸ್ಯರಲ್ಲಿ ಬಿಜೆಪಿ ಹೊರತುಪಡಿಸಿ ಇರುವ ಸದಸ್ಯರೆಂದರೆ ಜೆಡಿಎಸ್ ನಿಂದ ಕುಮಾರಸ್ವಾಮಿ ಮತ್ತು ಜೆಡಿಯುನಿಂದ ಲಲ್ಲನ್ ಸಿಂಗ್ ಮಾತ್ರ.* ಪ್ರಧಾನಿ ಮೋದಿ ಅವರು ಎಂಟು ಸಮಿತಿಗಳನ್ನು ರಚಿಸಿದ್ದು, ಬಹುತೇಕ ಎಲ್ಲಾ ಕಮಿಟಿಗೂ ಪ್ರಧಾನಿ ಮೋದಿಯವರೇ ಅಧ್ಯಕ್ಷರ ಸ್ಥಾನದಲ್ಲಿರುತ್ತಾರೆ. ರಾಜ್ಯದಿಂದ ಪ್ರಲ್ಹಾದ ಜೋಶಿ ಮತ್ತು ಕುಮಾರಸ್ವಾಮಿ ಈ ಎಂಟು ಸಮಿತಿಯಲ್ಲಿ ಸ್ಥಾನ ಪಡೆದಿದ್ದಾರೆ.