* ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಉತ್ತರಾಖಂಡ ಪಾತ್ರವಾಗಲಿದೆ' ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಜನವರಿ 14 ರಂದು ತಿಳಿಸಿದರು.* ಲಕ್ನೋದಲ್ಲಿ ನಡೆದ ಉತ್ತರಾಯಣಿ ಕೌತಿಕ್ ಕಾರ್ಯಕ್ರಮದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಜನಾಥ್ ಸಿಂಗ್ ಅವರು ಉತ್ತರಾಖಂಡದಲ್ಲಿ 2022ರಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಬಿಜೆಪಿ ನೀಡಿದ ಪ್ರಮುಖ ಚುನಾವಣಾ ಭರವಸೆಗಳಲ್ಲಿ ಏಕರೂಪ ನಾಗರಿಕ ಸಂಹಿತೆಯೂ ಒಂದಾಗಿದೆ.* ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಮೊದಲ ಸಚಿವ ಸಂಪುಟ ಸಭೆಯಲ್ಲಿ ಯುಸಿಸಿಯ ಕರಡು ರಚಿಸಲು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ಅವರ ನೇತೃತ್ವದ ಸಮಿತಿ ರಚಿಸಲು ಒಪ್ಪಿಗೆ ನೀಡಿದ್ದಾರೆ.* ತೆಲಂಗಾಣವನ್ನು ಆಂಧ್ರಪ್ರದೇಶದಿಂದ ಬೇರ್ಪಡಿಸಿ 10 ವರ್ಷಗಳಾದರೂ ಎರಡು ರಾಜ್ಯಗಳ ನಡುವೆ ಹಲವು ಸಮಸ್ಯೆಗಳು ಬಗೆಹರಿದಿಲ್ಲ' ಎಂದು ಹೇಳಿದರು.