* ಮಹತ್ವದ ಬೆಳವಣಿಗೆಯೊಂದರಲ್ಲಿ, ಮುಂದಿನ ವಾರ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಲು ಉತ್ತರಾಖಂಡ ಸಜ್ಜಾಗಿದೆ.* ನ್ಯಾಯಮೂರ್ತಿ (ನಿವೃತ್ತ) ರಂಜನಾ ದೇಸಾಯಿ ಅವರ ನೇತೃತ್ವದಲ್ಲಿ ರಚಿಸಲಾದ ಸಮಿತಿಯು ಮುಂದಿನ ಎರಡು ದಿನಗಳಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ವರದಿಯನ್ನು ಸಲ್ಲಿಸಲಿದೆ. * ಗೋವಾದಲ್ಲಿಯೂ ಏಕರೂಪ ನಾಗರಿಕ ಸಂಹಿತೆ ಜಾರಿಯಲ್ಲಿದ್ದು, ಕೇಂದ್ರಾಡಳಿತ ಪ್ರದೇಶವಾಗಿದ್ದ ಕಾಲದಲ್ಲಿಯೇ ಗೋವಾದಲ್ಲಿ (Goa) ಫ್ರೆಂಚ್ ಮಾದರಿಯ ನಾಗರಿಕ ಸಂಹಿತೆ ಜಾರಿಯಲ್ಲಿದೆ.* ಈ ಮಸೂದೆಯನ್ನು ಕಾನೂನಾಗಿ ಪರಿವರ್ತಿಸಿದ ನಂತರ, ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತು ಸ್ವೀಕಾರಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಇದು ಎಲ್ಲಾ ಧರ್ಮಗಳಿಗೂ ಅನ್ವಯಿಸುತ್ತದೆ.* ವಿವಾಹ ನೋಂದಣಿ, ವಿಚ್ಛೇದನ, ಆಸ್ತಿ ಹಕ್ಕುಗಳು, ಅಂತರ-ರಾಜ್ಯ ಆಸ್ತಿ ಹಕ್ಕುಗಳು, ನಿರ್ವಹಣೆ, ಮಕ್ಕಳ ಪಾಲನೆ ಮುಂತಾದ ವೈಯಕ್ತಿಕ ಕಾನೂನುಗಳಲ್ಲಿ ಏಕರೂಪತೆಯ ಮೇಲೆ ಮಸೂದೆ ವಿಶಾಲ ಗಮನವನ್ನು ಹೊಂದಿದೆ.* ಉತ್ತರಾಖಂಡದಂತೆ, ಗುಜರಾತ್‌ನಲ್ಲಿ ಕೂಡ 2024ರಲ್ಲಿ ಲೋಕಸಭಾ ಚುನಾವಣೆಯ ಮೊದಲು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರುವ ಸಾಧ್ಯತೆ ಇದ್ದು, ಒಂದು ವೇಳೆ ನೀತಿ ಜಾರಿಗೆ ತಂದರೆ ಗುಜರಾತ್‌ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆಗೊಳಿಸಿದ 2ನೇ ರಾಜ್ಯವಾಗಲಿದೆ.