* '1965 ಏಪ್ರಿಲ್ 2 ರಂದು ಕರ್ನಾಟಕ ರಾಜ್ಯ ಪೊಲೀಸ್ ಕಾಯ್ದೆ ಜಾರಿಗೆ ಬಂದಿದ್ದು, ಈ ದಿನವನ್ನು ಪೊಲೀಸ್ ಧ್ವಜ ದಿನಾಚಾರಣೆಯನ್ನಾಗಿ ಆಚರಿಸಲಾಗುತ್ತದೆ. ಅಲ್ಲದೆ ಈ ದಿನವನ್ನು ಪೊಲೀಸ್ ಕಲ್ಯಾಣ ದಿನವನ್ನಾಗಿ ಕೂಡ ಆಚರಿಸಲಾಗುತ್ತದೆ.* ಈ ವಿಶೇಷ ಪೊಲೀಸ್ ಧ್ವಜ ದಿನದಂದು ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದವರನ್ನು ನೆನಸಿ ಅವರ ಕಲ್ಯಾಣದ ಕಡೆಗೆ ಚಿಂತಿಸಲಾಗುತ್ತದೆ.