* ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಏಪ್ರಿಲ್ 30 ರಂದು ಆಯುಷ್ಮಾನ್ ಭಾರತ್ ದಿವಸ್ ಆಚರಿಸಲಾಗುತ್ತದೆ.* ಕೋಟ್ಯಂತರ ಭಾರತೀಯರಿಗೆ ಉಚಿತ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಜಾರಿಗೊಳಿಸಿರುವ ಆಯುಷ್ಮಾನ್ ಭಾರತ್ ಯೋಜನೆಯ (Ayushman Bharat Yojana) ಕುರಿತು ಜನರಲ್ಲಿ ಅರಿವು ಮೂಡಿಸಲು ಪ್ರತಿ ವರ್ಷ ಆಯುಷ್ಮಾನ್ ದಿನವನ್ನು ಆಚರಿಸಲಾಗುತ್ತದೆ. * బಡ ಮತ್ತು ಮಧ್ಯಮ ವರ್ಗದ ಜನರಿಗೆ ಅನುಕೂಲ 'ಮಾಡಿಕೊಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ 2018ರ ಸೆಪ್ಟೆಂಬರ್ 18ರಂದು ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸಿತು. * ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (ಪಿಎಂಜೆಎಐ) ಅನ್ನು ಆಯುಷ್ಮಾನ್ ಭಾರತ್ ಯೋಜನೆ ಎಂದೂ ಕರೆಯಲಾಗುತ್ತದೆ. * ಆರ್ಥಿಕವಾಗಿ ಹಿಂದುಳಿದಿರುವ ಸುಮಾರು 35 ಕೋಟಿ ಜನರಿಗೆ ಕೈಗೆಟಕುವ ದರದಲ್ಲಿ ಮತ್ತು ಸುಲಭವಾಗಿ ಆರೋಗ್ಯ ಸೇವೆಯನ್ನು ಒದಗಿಸುವ ಸಲುವಾಗಿ ಭಾರತ ಸರಕಾರವು ಈ ಯೋಜನೆಯನ್ನು ಪ್ರಾರಂಬಿಸಿತು.* ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (PM-JAY) ಆರೋಗ್ಯ ವಿಮಾ ಯೋಜನೆಯಾಗಿದ್ದು, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ವರ್ಷಕ್ಕೆ 5 ಲಕ್ಷ ರೂ. ವರೆಗೆ ನಗದು ರಹಿತ ಮತ್ತು ಕೈಗೆಟುಕುವ ವೈದ್ಯಕೀಯ ರಕ್ಷಣೆಯನ್ನು ನೀಡುವ ಉದ್ದೇಶ ಹೊಂದಿದೆ.* ಆಯುಷ್ಮಾನ್ ಭಾರತ್ ಯೋಜನೆಯು ಎರಡು ಘಟಕಗಳನ್ನು ಒಳಗೊಂಡಿದೆ: ಫಲಾನುಭವಿಗಳಿಗೆ ದ್ವಿತೀಯ ಮತ್ತು ತೃತೀಯ ಆರೋಗ್ಯ ಸೇವೆಗಳನ್ನು ನೀಡುವ PM-JAY ಮತ್ತು ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ನೀಡುವ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳು (HWC ಗಳು).- ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳು (AB-HWC ಗಳು): ಈ ಕೇಂದ್ರಗಳು ತಡೆಗಟ್ಟುವಿಕೆ, ಪ್ರಚಾರ ಮತ್ತು ಗುಣಪಡಿಸುವ ಚಿಕಿತ್ಸೆಯನ್ನು ಒದಗಿಸುತ್ತವೆ, ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಜನರ ಮನೆಗಳಿಗೆ ಹತ್ತಿರ ತರುವ ಉದ್ದೇಶವನ್ನು ಹೊಂದಿವೆ.- ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (PM-JAY): ಈ ಆರೋಗ್ಯ ವಿಮಾ ಕಾರ್ಯಕ್ರಮವು ಕಡಿಮೆ ಆದಾಯದ ಕುಟುಂಬಗಳಿಗೆ ವಾರ್ಷಿಕವಾಗಿ 5 ಲಕ್ಷ ರೂ.ಗಳವರೆಗೆ ನಗದುರಹಿತ, ಸಮಂಜಸವಾದ ಬೆಲೆಯ ವೈದ್ಯಕೀಯ ರಕ್ಷಣೆಯನ್ನು ನೀಡುತ್ತದೆ.