* ಏರೋ ಇಂಡಿಯಾದ 15ನೇ ಆವೃತ್ತಿ ಯಲಹಂಕದ ಏರ್ ಫೋರ್ಸ್ ಸ್ಟೇಷನ್ ನಲ್ಲಿ 2025ರ ಫೆಬ್ರುವರಿ 10ರಿಂದ 14ರವರೆಗೆ ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ಏರೋ ಇಂಡಿಯಾ ಪ್ರದರ್ಶನ ನಡೆಯಲಿದೆ.* ಬೆಂಗಳೂರಿನಲ್ಲಿ ದ್ವೈವಾರ್ಷಿಕವಾಗಿ ನಡೆಯುವ ಏರೋ ಇಂಡಿಯಾದ ಮುಂದಿನ ಆವೃತ್ತಿಯ ದಿನಾಂಕಗಳನ್ನು ರಕ್ಷಣಾ ಸಚಿವಾಲಯ ಅಕ್ಟೋಬರ್ 3, 2024 ರಂದು (ಗುರುವಾರ) ಪ್ರಕಟಿಸಿದೆ. * ರಕ್ಷಣಾ ಇಲಾಖೆ, ಭಾರತೀಯ ವಾಯು ಸೇನೆ, ಹೆಚ್.ಎ.ಎಲ್, ಡಿ.ಆರ್.ಡಿ.ಒ., ನಾಗರಿಕ ವಿಮಾನಯಾನ ಸಚಿವಾಲಯಗಳು ಜಂಟಿಯಾಗಿ ಆಯೋಜಿಸುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ ದೇಶ ವಿದೇಶಗಳ ವೈಮಾನಿಕ ಕ್ಷೇತ್ರದ ನೂರಾರು ಕಂಪನಿಗಳು ಭಾಗವಹಿಸಲಿವೆ.* ಯುದ್ಧವಿಮಾನ, ಹೆಲಿಕಾಪ್ಟರ್, ನಾಗರೀಕ ವಿಮಾನ, ಸಣ್ಣ ವಿಮಾನಗಳು, ಕ್ಷಿಪಣಿಗಳು, ಶಸ್ತ್ರಾಸ್ತ್ರಗಳು, ರಾಡಾರ್ ವ್ಯವಸ್ಥೆ ಸೇರಿದಂತೆ ರಕ್ಷಣಾ ವಲಯ ಮತ್ತು ನಾಗರೀಕ ವಿಮಾನಯಾನಕ್ಕೆ ಸಂಬಂಧಿಸಿದ ಉತ್ಪನ್ನಗಳು, ಬಿಡಿ ಭಾಗಗಳು, ಮಾಹಿತಿ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ ಉತ್ಪನ್ನಗಳು ಪ್ರದರ್ಶನದಲ್ಲಿರುತ್ತವೆ.* 2023ರ ಆವೃತ್ತಿಯಲ್ಲಿ 809 ನವೋದ್ಯಮಿಗಳ ಸಹಿತ ವಿವಿಧ ಪ್ರದರ್ಶಕರು ಪಾಲ್ಗೊಂಡಿದ್ದರು. ಭಾರತ 53 ಯುದ್ಧವಿಮಾನಗಳನ್ನು ಪ್ರದರ್ಶಿಸಿತ್ತು. ವಿವಿಧ ದೇಶಗಳೊಂದಿಗೆ 250ಕ್ಕೂ ಹೆಚ್ಚು ಒಡಂಬಡಿಕೆಗಳ ಮೂಲಕ 75 ಸಾವಿರ ಕೋಟಿ ರೂ. ಮೌಲ.ದ ವಹಿವಾಟು ನಡೆದಿತು.