* ಟೀಮ್ ಇಂಡಿಯಾ ಆಟಗಾರ ಮನೋಜ್ ತಿವಾರಿ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.* ಮನೋಜ್ ತಿವಾರಿಯವರು 2008 ರಲ್ಲಿ ಬ್ರಿಸ್ಬೇನ್ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದರು. 2008 ರಿಂದ ತಿವಾರಿಯವರು ಟೀಮ್ ಇಂಡಿಯಾ ಪರ 15 ಪಂದ್ಯಗಳನ್ನಾಡಿದ್ದಾರೆ.* ಮನೋಜ ಅವರು ಸೋಷಿಯಲ್ ಮೀಡಿಯಾ ಮೂಲಕ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸುತ್ತಿರುವುದಾಗಿ ತಿಳಿಸಿದ್ದಾರೆ.* ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಮನೋಜ್ ತಿವಾರಿ ಕೊಲ್ಕತ್ತಾ ನೈಟ್ ರೈಡರ್ಸ್, ರೈಸಿಂಗ್ ಪುಣೆ ಸೂಪರ್ಜೈಂಟ್ಸ್ ಪರ ಕಣಕ್ಕಿಳಿದಿದ್ದರು. ಈ ವೇಳೆ ಒಟ್ಟು 98 ಪಂದ್ಯಗಳನ್ನಾಡಿರುವ ಅವರು ಒಟ್ಟು 1686 ರನ್ ಬಾರಿಸಿದ್ದಾರೆ.