* ಭಾರತದ ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಚೌಕಟ್ಟು( National Institutional Ranking Framework) ಎನ್‌ಐಆರ್‌ಎಫ್ 2023ರ ಪಟ್ಟಿಯನ್ನು ದೆಹಲಿಯಲ್ಲಿ ಜೂನ್ 5 (ಸೋಮವಾರ)ರಂದು ಕೇಂದ್ರ ಶಿಕ್ಷಣ ಇಲಾಖೆಯ ರಾಜ್ಯ ಸಚಿವ ಡಾ ರಾಜ್‌ಕುಮಾರ್ ರಂಜನ್ ಸಿಂಗ್ ಅವರು ಬಿಡುಗಡೆ ಮಾಡಲಾಗಿದೆ.* 2023ನೇ ಸಾಲಿನ ಭಾರತದ ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಚೌಕಟ್ಟು (ಎನ್‌ಐಆರ್‌ಎಫ್) ರ‍್ಯಾಂಕಿಂಗ್ ಪಟ್ಟಿಯಲ್ಲಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ (ಐಐಎಸ್‌ಸಿ) ಉತ್ತಮ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ನಂಬರ್ 1 ಸ್ಥಾನ ಪಡೆದಿದೆ.* ಕಾನೂನು ವಿಭಾಗದಲ್ಲಿ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಪ್ರಥಮ ಸ್ಥಾನ, ನವದೆಹಲಿಯ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯ ದ್ವಿತೀಯ ಸ್ಥಾನ ಮತ್ತು ನಲ್ಸರಾ ಕಾನೂನು ವಿಶ್ವವಿದ್ಯಾಲಯ ಹೈದರಬಾದ್ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ.