* ಚೀನಾದ ರಕ್ಷಣಾ ಸಚಿವ ಜನರಲ್ ಲಿ ಶಾಂಗ್ ಪು ಅವರು ಏಪ್ರಿಲ್ 27 ಮತ್ತು 28 ರಂದು ನಡೆಯಲಿರುವ ಶಾಂಘಿ ಸಹಕಾರ ಸಂಘಟನೆಯ (SCO) ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಭೇಟಿ ನೀಡಲಿದ್ದಾರೆ. * ಭಾರತಕ್ಕೆ  ಚೀನಾದ ರಕ್ಷಣಾ ಸಚಿವ ಜನರಲ್ ಲಿ ಶಾಂಗ್ ಪು ರವರು ಭೇಟಿ ನೀಡುವ ಸಂದರ್ಭದಲ್ಲಿ ಪೂರ್ವ ಲಡಾಖ್ ಬಿಕ್ಕಟ್ಟನ್ನು ಕೊನೆಗೊಳಿಸಲು ಭಾರತದ ರಕ್ಷಣಾಸಚಿವರಾದ ರಾಜನಾಥ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಚೀನಾ ರಕ್ಷಣಾ ಸಚಿವಾಲವು ಏಪ್ರಿಲ್ 25 ರಂದು ತಿಳಿಸಿದೆ.* ಪೂರ್ವ ಲಡಾಖ್ ಬಿಕ್ಕಟ್ಟು ಕುರಿತು ರಾಜನಾಥ್ ಸಿಂಗ್-ಲಿ ಅವರ ಮಾತುಕತೆ ನಡೆಯಲಿದೆ ಎಂದು ನಿರೀಕ್ಷಿಸಲಾಗಿದ್ದು, 'ಗಡಿಯಲ್ಲಿ ಶಾಂತಿ ಕಾಪಾಡುವುದರ ಜೊತೆಗೆ, ಬಿಕ್ಕಟ್ಟಿನ ಕುರಿತು ತ್ವರಿಗತಿಯಲ್ಲಿ ನಿರ್ಧಾರ ಕೈಗೊಳ್ಳಲು ಎರಡೂ ದೇಶಗಳು ಒಪ್ಪಿಗೆ ನೀಡಿವೆ' ಎಂದೂ ಹೇಳಿಕೆಯಲ್ಲಿ ತಿಳಿಸಲಾಗಿದೆ.